ಮನೆ ಉದ್ಯೋಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅ. 9 ರಂದು ನೇರ ಸಂದರ್ಶನ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅ. 9 ರಂದು ನೇರ ಸಂದರ್ಶನ

0

ರಾಮನಗರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಅ. 9ರ ಬುಧವಾರ ಉಚಿತ ನೇರ ಸಂದರ್ಶನ ಆಯೋಜಿಸಲಾಗಿದೆ.

Join Our Whatsapp Group

ನೇರ ಸಂದರ್ಶನ ಕಾರ್ಯಕ್ರಮದಲ್ಲಿ ಖಾಸಗಿ ಸಂಸ್ಥೆಯವರು ಭಾಗವಹಿಸುತ್ತಿದ್ದು, ಉದ್ಯೋಗಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳಲಿರುವುದರಿಂದ ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತಿರಿರುವ ಎಸ್‌ ಎಸ್‌ ಎಲ್‌ ಸಿ, ಐಟಿಐ ಹಾಗೂ ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ/ರೆಸ್ಯೂಮ್ (ಬಯೋಡೇಟಾ) ಇತ್ಯಾದಿ ದಾಖಲೆಗಳೊಂದಿಗೆ ಅ. 9ರ ಬುಧವಾರ ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕೌಶಲ್ಯ ಕೇಂದ್ರ/ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಠಡಿ ಸಂಖ್ಯೆ: 208, ಮೊದಲನೇ ಮಹಡಿ, ಬಿ.ಎಂ ರಸ್ತೆ, ಕಂದಾಯ ಭವನ, ರಾಮನಗರ ಈ ಕಚೇರಿಗೆ ಭೇಟಿ ನೀಡಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 080-27273364, 9844021496 ಅಥವಾ 9900331779 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.