ಮನೆ ರಾಷ್ಟ್ರೀಯ ಹರ್ಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ: ಮತ ಎಣಿಕೆ ಶುರು

ಹರ್ಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ: ಮತ ಎಣಿಕೆ ಶುರು

0

ಹರ್ಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದೀಗ ಮತ ಎಣಿಕೆ ಕಾರ್ಯ ಆರಂಭವಾಗಿದೆ.

Join Our Whatsapp Group

ಚುನಾವಣೆಯಲ್ಲಿ ಪ್ರಮುಖ ಪಕ್ಷಗಳು ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ)-ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ)-ಆಜಾದ್ ಸಮಾಜ ಪಕ್ಷ (ಎಎಸ್‌ಪಿ). ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆಯಿದ್ದು, ಜಮ್ಮು-ಕಾಶ್ಮೀರದಲ್ಲಿ ಹರ್ಯಾಣದ ಜತೆಗೆ ಮತದಾನ ನಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.

ಹರ್ಯಾಣದಲ್ಲಿ 67.90% ಮತದಾನವಾಗಿದೆ, 90 ವಿಧಾನಸಭಾ ಸ್ಥಾನಗಳು, ಒಟ್ಟು 1,031 ಅಭ್ಯರ್ಥಿಗಳು, 464 ಸ್ವತಂತ್ರ ಅಭ್ಯರ್ಥಿಗಳು, 101 ಮಹಿಳೆಯರು, ಹಲವು ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್ ಗೆಲುವಿನ ಮುನ್ಸೂಚನೆ ನೀಡಿವೆ.

ಜಮ್ಮು ಕಾಶ್ಮೀರ 90 ವಿಧಾನಸಭಾ ಸ್ಥಾನಗಳಿಗೆ ಮೂರು ಹಂತಗಳಲ್ಲಿ ಮತದಾನವಾಗಿದೆ,  873 ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದೆ, 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾಯಿತ ಸರ್ಕಾರ ರಚನೆಗೆ ದಾರಿ ಸುಗಮವಾಗಲಿದೆ.

ಮುಖ ಪಕ್ಷಗಳಾದ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (NC) ಮೈತ್ರಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಮತ್ತು ಭಾರತೀಯ ಜನತಾ ಪಕ್ಷ (BJP). ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ. ಮೊದಲ ಹಂತದಲ್ಲಿ ಸೆಪ್ಟೆಂಬರ್ 18 ರಂದು 24 ಸ್ಥಾನಗಳಿಗೆ ಮತದಾನ ನಡೆದಿತ್ತು. ಎರಡನೇ ಹಂತದಲ್ಲಿ ಸೆಪ್ಟೆಂಬರ್ 25 ರಂದು 26 ಸ್ಥಾನಗಳಿಗೆ ಮತದಾನ ನಡೆಯಿತು. ಮೂರನೇ ಹಂತದಲ್ಲಿ ಅಕ್ಟೋಬರ್ 1 ರಂದು 40 ಸ್ಥಾನಗಳಿಗೆ ಮತದಾನ ನಡೆದಿತ್ತು. ಇಂದು ಈ 90 ಕ್ಷೇತ್ರಗಳ ಮತ ಎಣಿಕೆ ನಂತರ ಫಲಿತಾಂಶ ಪ್ರಕಟವಾಗಲಿದೆ.

ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 873 ಅಭ್ಯರ್ಥಿಗಳು ಕಣದಲ್ಲಿದ್ದರು. ಇಂದು ಮತ ಎಣಿಕೆ ಬಳಿಕ ಫಲಿತಾಂಶ ಬಂದ ತಕ್ಷಣ ಅವರ ಭವಿಷ್ಯ ನಿರ್ಧಾರವಾಗಲಿದೆ. ಜಮ್ಮು ಮತ್ತು ಕಾಶ್ಮೀರದ 20 ಜಿಲ್ಲೆಗಳಲ್ಲಿ ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ 700 ವೀಕ್ಷಕರನ್ನು ಸಹ ನಿಯೋಜಿಸಲಾಗಿದೆ. ಇದರೊಂದಿಗೆ 10 ಸಾವಿರಕ್ಕೂ ಹೆಚ್ಚು ಹೆಚ್ಚುವರಿ ಭದ್ರತಾ ಪಡೆಗಳನ್ನು ಕೂಡ ಭದ್ರತೆಗೆ ನಿಯೋಜಿಸಲಾಗುವುದು.

ಭಾರೀ ಕುತೂಹಲ ಮೂಡಿಸಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ವಿಧಾನಸಭೆಯ ಚುನಾವಣಾ ಮತ ಎಣಿಕೆ ಇಂದು ನಡೆಯಲಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಕುರಿತು ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ನಿರೀಕ್ಷೆಗಳಿವೆ.