ಮನೆ ಕಾನೂನು ರಾಜ್ಯದ ಹಲವು ಆರ್ ​ಟಿಓ ಚೆಕ್​​ ಪೋಸ್ಟ್​ ಗಳ ಮೇಲೆ ಲೋಕಾಯುಕ್ತ ದಾಳಿ: ಪರಿಶೀಲನೆ

ರಾಜ್ಯದ ಹಲವು ಆರ್ ​ಟಿಓ ಚೆಕ್​​ ಪೋಸ್ಟ್​ ಗಳ ಮೇಲೆ ಲೋಕಾಯುಕ್ತ ದಾಳಿ: ಪರಿಶೀಲನೆ

0

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್ ​​ಗಳ ಮೇಲೆ ದಾಳಿ ಮಾಡಿದ್ದಾರೆ.

Join Our Whatsapp Group

ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿನ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್ ​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

ಆರ್​ಟಿಓ ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

ದೂರು ಕೇಳಿಬಂದ ಆರ್ ​ಟಿಓ ಚೆಕ್ ​ಪೋಸ್ಟ್​​ ಗಳ ಮೇಲೆ ಅಧಿಕಾರಿಗಳು ಇಂದು (ಅ.08) ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್ ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ. ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್ ​ಟಿಓ ಚೆಕ್ ಪೋಸ್ಟ್ ​​ನಲ್ಲಿನ ಸಿಬ್ಬಂದಿ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್ ​ಪಿ ಗೀತಾ ಬೀದರ್ ಮತ್ತು ಡಿವೈಎಸ್ ​ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್ ​ಟಿಓ ಚೆಕ್ ​ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್​ಟಿಓ ಚೆಕ್‌ ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ಮಾಡಿದೆ. ಅಧಿಕಾರಿಗಳು ಚೆಕ್ ಪೋಸ್ಟ್ ​​ನಲ್ಲಿದ್ದ ಹಣವನ್ನು ವಶಪಡಿಸಿಕೊಂಡಿದ್ದು, ಶೋಧ ಕಾರ್ಯ ಮುಂದುವರೆದಿದೆ.