ಬಳ್ಳಾರಿ: ತಾಲೂಕಿನ ಸಿಂದುವಾಳ ಗ್ರಾಮದ ಬಳಿ ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಎಸಿ ವಾಹನದ ಟಯರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ(ಅ.8) ದಂದು ನಡೆದಿದೆ.
ಮೋಕಾ ಗ್ರಾಮದ ನಿವಾಸಿ ರವಿಕುಮಾರ್ (16) ಮೃತ ಬಾಲಕ.
ಮೋಕಾ ಗ್ರಾಮದಿಂದ ನೆರೆಯ ಆಂಧ್ರಪ್ರದೇಶಕ್ಕೆ ಹತ್ತಿ ಕೀಳಲು ಹೊರಟಿದ್ದ ಏಸ್ ವಾಹನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರನ್ನು ಹತ್ತಿಸಿದ ಪರಿಣಾಮ ಟಯರ್ ಸ್ಫೋಟಗೊಂಡು ಪಲ್ಟಿಯಾಗಿದೆ ಪರಿಣಾಮ ಓರ್ವ ಬಾಲಕ ಮೃತಪಟ್ಟಿದ್ದು 16 ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಮೋಕಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಮೋಕಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.