ಮೈಸೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೈಸೂರು ಜಿಲ್ಲೆ ಪ್ರವಾಸ ಕೈಗೊಂಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಇಂದು (ಅ.08) ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ಶಾಸಕ ಹರೀಶ್ ಗೌಡ ಅವರ ನಿವಾಸಕ್ಕೆ ಭೇಟಿ ನೀಡಿದರು.
ಶಾಸಕ ಹರೀಶ್ ಗೌಡ ಜೊತೆ ಮೈಸೂರು ರಾಜಕಾರಣದ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸತೀಶ್ ಜಾರಕಿಹೊಳಿ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರ ಗೆಲ್ಲಬಹುದಿತ್ತು, ಯಾಕೆ ಸಾಧ್ಯವಾಗಲಿಲ್ಲ ಎಂದು ಹರೀಶ್ ಗೌಡ ಅವರಿಗೆ ಪ್ರಶ್ನಿಸಿದರು.
ಇದಕ್ಕೆ, ಕಾಂಗ್ರೆಸ್ ಶಾಸಕ ಹರೀಶ್ ಗೌಡ “ನಮ್ಮ ಪಕ್ಷದ ಅಭ್ಯರ್ಥಿ ಸರಿ ಇಲ್ಲದಿದ್ದಕ್ಕೆ ಮೈಸೂರು ಲೋಕಸಭಾ ಕ್ಷೇತ್ರ ಗೆಲ್ಲಲಿಲ್ಲ” ಎಂದು ಹೇಳಿದ್ದಾರೆ. ಕಳೆದ ಲೋಕಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಸ್ಪರ್ಧೆ ಮಾಡಿದ್ದರು.
ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಪ್ರಮುಖ ಕ್ಷೇತ್ರಗಳಲ್ಲಿ ಮೈಸೂರು ಕೂಡ ಒಂದಾಗಿತ್ತು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸ್ಪರ್ಧಿಸಿ ಗೆಲವು ಸಾಧಿಸಿದ್ದಾರೆ. ಇವರಿಗೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ನಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸ್ಪರ್ಧೆ ಮಾಡಿದ್ದರು.