ಮನೆ ಅಪರಾಧ ಝೀರೊ ಟ್ರಾಫಿಕ್‌ ನಿಯಮ ಉಲ್ಲಂಘನೆ: ಶಾಸಕ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ವಶಕ್ಕೆ

ಝೀರೊ ಟ್ರಾಫಿಕ್‌ ನಿಯಮ ಉಲ್ಲಂಘನೆ: ಶಾಸಕ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ವಶಕ್ಕೆ

0

ಗಂಗಾವತಿ(ಕೊಪ್ಪಳ): ಶಾಸಕ ಜನಾರ್ದನ ರೆಡ್ಡಿ ಅವರ ರೇಂಜ್ ರೋವರ್ ಕಾರು ಹಾಗೂ ಅವರ ಬೆಂಬಲಿಗರ ಎರಡು ಕಾರುಗಳನ್ನು ಮಂಗಳವಾರ ನಗರದ ಸಂಚಾರಿ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Join Our Whatsapp Group

ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಗಂಗಾವತಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುವ ಸಂದರ್ಭದಲ್ಲಿ ಝೀರೊ ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ದರಿಂದ ರೆಡ್ಡಿ ಕಾರು ಚಾಲಕ ಹುಸೇನ್ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಾಗಿತ್ತು.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ನಗರ ಸಂಚಾರಿ ಠಾಣೆಯ ಪೊಲೀಸರು ಮೂರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.