ಮನೆ ಅಪರಾಧ ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳ ದಾರುಣ ಸಾವು

ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳ ದಾರುಣ ಸಾವು

0

ವಿಜಯನಗರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳ ಸಾವನ್ನಪ್ಪಿದ ದಾರುಣ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದಲ್ಲಿ ನಡೆದಿದೆ.

Join Our Whatsapp Group

 ಕುಮತಿ ಗ್ರಾಮದ ಸಾಗರ್(14), ಗುರು(14) ಹಾಗೂ ವಿನಯ್(11) ಮೃತರು.

ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಇತ್ತ  ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಸ್ಥಳಕ್ಕೆ ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.