ಮನೆ ಅಪರಾಧ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ ಗೆ ಓರ್ವ ವ್ಯಕ್ತಿ ಬಲಿ

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ ಗೆ ಓರ್ವ ವ್ಯಕ್ತಿ ಬಲಿ

0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸಹಕಾರ ನಗರದ ರೈಲ್ವೆ ಅಂಡರ್​ ಪಾಸ್​​ ಬಳಿ ಭೀಕರ ಅಪಘಾತ ಸಂಭವಿಸಿದ್ದು ಹಿಟ್ ಆ್ಯಂಡ್ ರನ್​ ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ.

Join Our Whatsapp Group

ಮುಂಜಾನೆ ಸುಮಾರು 5 ಗಂಟೆಗೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಾಹನಕ್ಕೆ ಸಿಲುಕಿ ಅನಾಮಿಕ ವ್ಯಕ್ತಿ ಬಲಿಯಾಗಿದ್ದಾರೆ. ಅಪಘಾತ ನಡೆಸಿ ಚಾಲಕ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಮೃತ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ.