ಮನೆ ಉದ್ಯೋಗ ಬೆಂಗಳೂರು ಗ್ರಾಮಾಂತರ ಜಿಲ್ಲೆ: ಒಂದು ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಒಂದು ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

0

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ – ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರು ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಹ ಪತ್ರಿಕೋದ್ಯಮ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ.

Join Our Whatsapp Group

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಗೆ ಸೇರಿದ, ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

      ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ – ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಅಪ್ರೆಂಟಿಸ್ ಮಾಹೆಯಾನ ರೂ.15000/- ಗಳ ಸ್ಟೇಫಂಡ್(ಗೌರವ ಸಂಭಾವನೆ) ನೀಡಲಾಗುವುದು.

      ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಆಧಾರ್, ಎಸ್.ಎಸ್. ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ತ್ರಿ-ಪ್ರತಿಯಲ್ಲಿ 2024 ರ ಅಕ್ಟೋಬರ್ 28 ರೊಳಗಾಗಿ ಉಪನಿರ್ದೆಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.17, ಭಗವಾನ್ ಮಾಹಾವೀರ ರಸ್ತೆ, ವಾರ್ತಾ ಸೌಧ, 2ನೇ ಮಹಡಿ, ಇನ್ಫೆಂಟ್ರಿ ರಸ್ತೆ, ಬೆಂಗಳೂರು-560001 ಗೆ ಸಲ್ಲಿಸುವುದು.

      ಆಸಕ್ತರು ಅರ್ಹತೆಗಳು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಿರುವ ಇಲಾಖೆ ಕಚೇರಿಯ ಇ-ಮೇಲ್ ruralinformation@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.