ಮನೆ ಸುದ್ದಿ ಜಾಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಿದ್ಧತೆ ಬಗ್ಗೆ ಸಿಎಂ ಬೊಮ್ಮಾಯಿ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮೋದಿ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಿದ್ಧತೆ ಬಗ್ಗೆ ಸಿಎಂ ಬೊಮ್ಮಾಯಿ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮೋದಿ

0

ಬೆಂಗಳೂರು (Bengaluru)-ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳ ಕುರಿತು ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರನ್ಸ್ ನಡೆಸಿ ಚರ್ಚಿಸಿದರು.

ಯೋಗ ದಿನಾಚರಣೆ ಮೈಸೂರಿನ ಅರಮನೆ ಆವರಣದಲ್ಲಿ ಆಯೋಜಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು, ತಮ್ಮ ಆಗಮನವನ್ನು ಎದುರು ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮೊದಲಾದವರು ಪಾಲ್ಗೊಂಡಿದ್ದರು.