ಮನೆ ರಾಷ್ಟ್ರೀಯ ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಭದ್ರತೆ ಹೆಚ್ಚಿಸಿದ ಪೊಲೀಸರು

ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಭದ್ರತೆ ಹೆಚ್ಚಿಸಿದ ಪೊಲೀಸರು

0

ಮುಂಬಯಿ: ನಟ ಸಲ್ಮಾನ್ ಖಾನ್ ಅವರ ಆಪ್ತ ಸ್ನೇಹಿತ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬೆನ್ನಲ್ಲೇ ಇದೀಗ ನಟ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

Join Our Whatsapp Group

ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಟನಿಗೆ ವೈ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದ್ದು ಪೊಲೀಸ್ ಬೆಂಗಾವಲು ವಾಹನದ ಜೊತೆಗೆ ಶಸ್ತ್ರಾಸ್ತ್ರಗಳನ್ನು ಬಳಸಲು ತರಬೇತಿ ಪಡೆದ ಕಾನ್ಸ್‌ ಟೇಬಲ್ ಅವರ ಜೊತೆಯಲ್ಲಿರಲಿದ್ದಾರೆ ಎಂದು ಮಾಹಿತಿ ನೀಡಿದೆ.

ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದ್ದು ಇದರ ಬೆನ್ನಲೇ ನಟ ಸಲ್ಮಾನ್ ಖಾನ್ ಅವರಿಗೂ ಈ ಹಿಂದೆ ಹಲವಾರು ಬಾರಿ ಜೀವ ಬೆದರಿಕೆ ಕೂಡ ಬಂದಿತ್ತು ಈ ಎಲ್ಲ ಕಾರಣಕ್ಕೆ ಸಂಬಂಧಿಸಿ ನಟನಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರದ ಪನ್ವೇಲ್‌ ನಲ್ಲಿರುವ ಸಲ್ಮಾನ್ ಖಾನ್ ಅವರ ಫಾರ್ಮ್‌ಹೌಸ್‌ ಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಫಾರ್ಮ್‌ ಹೌಸ್‌ ನ ಒಳಗೆ ಮತ್ತು ಹೊರಗೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ, ನವಿ ಮುಂಬೈ ಪೊಲೀಸರು ಫಾರ್ಮ್‌ಹೌಸ್ ಸುತ್ತಲೂ ಸಂಚರಿಸುವ ವಾಹನಗಳನ್ನು ಪರಿಶೀಲಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ವರ್ಷದ ಜೂನ್‌ನಲ್ಲಿ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಅವರನ್ನು ಅವರ ಫಾರ್ಮ್‌ಹೌಸ್ ಬಳಿ ಕೊಲ್ಲುವ ಯೋಜನೆಯನ್ನು ವಿಫಲಗೊಳಿಸಿದರು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಸಲ್ಮಾನ್ ಖಾನ್ ಅವರ ಫಾರ್ಮ್‌ಹೌಸ್ ಬಳಿ ಅವರ ಕಾರನ್ನು ನಿಲ್ಲಿಸಿ ಎಕೆ-47 ಗನ್‌ಗಳಿಂದ ಗುಂಡಿಕ್ಕಿ ಕೊಲ್ಲಲು ಯೋಜನೆ ರೂಪಿಸಿದ್ದರು ಆದರೆ ಪೊಲೀಸರು ಅದನ್ನು ವಿಫಲಗೊಳಿಸಿದ್ದಾರೆ.

ಇದಾದ ಬಳಿಕ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಪಾರ್ಟ್ಮೆಂಟ್ ಮೇಲೆ ಗುಂಡಿನ ದಾಳಿ ನಡೆಸಿದ್ದರು.