ಮನೆ ರಾಜಕೀಯ ಸ್ನೇಹಮಯಿ ಕೃಷ್ಣ 43 ಪ್ರಕರಣಗಳು ದಾಖಲಾಗಿವೆ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆರೋಪ

ಸ್ನೇಹಮಯಿ ಕೃಷ್ಣ 43 ಪ್ರಕರಣಗಳು ದಾಖಲಾಗಿವೆ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆರೋಪ

0

ಮೈಸೂರು: ಆರ್ ​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಸ್ನೇಹಮಯಿ ಕೃಷ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಂಧಿಸಿ ವಿಚಾರ ನಡೆಸುವಂತೆ ಆಗ್ರಹಿಸಿದ್ದಾರೆ.

Join Our Whatsapp Group

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ, ಪ್ರತಿನಿತ್ಯ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿದ್ದಾರೆ. ಅಧಿಕಾರಿಗಳ ವಿರುದ್ಧ ಒತ್ತಡ ಹೇರುತ್ತಿದ್ದಾರೆ. ಬಿಜೆಪಿ ನಾಯಕರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿದರು.

ನಾನು (ಲಕ್ಷ್ಮಣ್) ಪ್ರತಿನಿತ್ಯ ಲೋಕಾಯುಕ್ತಗೆ ಹೋಗುತ್ತಿದ್ದಾರೆಂದು ಆರೋಪಿಸಿದ್ದಾರೆ. ಆದರೆ ನಾನು ಒಮ್ಮೆ ಮಾತ್ರ ಹೋಗಿದ್ದೇನೆ. ಲೋಕಾಯುಕ್ತ ಕಚೇರಿ ಪಕ್ಕದಲ್ಲಿರುವ ಹೋಟೆಲ್‌ ಗೆ ಕಾಫಿ ಕುಡಿಯಲು ಪ್ರತಿನಿತ್ಯ ಹೋಗುತ್ತೇನೆ. ಸ್ನೇಹಮಯಿ ಕೃಷ್ಣ ಓರ್ವ ಬ್ಲಾಕ್ ​ಮೇಲರ್. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮಾಧ್ಯಮಗಳ ಮುಂದೆ ಸುಳ್ಳು ಹೇಳಿಕೆಗಳನ್ನು ನೀಡಿ ಪ್ರಚಾರ ಪಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಸ್ನೇಹಮಯಿ ಕೃಷ್ಣ ಕೇಂದ್ರ ಸರ್ಕಾರದ ಸೂತ್ರಧಾರರಂತೆ ವರ್ತಿಸುತ್ತಿದ್ದಾರೆ. ಪ್ರಕರಣ ತನಿಖೆಯ ಹಂತದಲ್ಲಿರುವಾಗ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಯೋತ್ಪಾದಕರು. ಅವರನ್ನು ಭಯೋತ್ಪಾದಕರು ಅಂತ ಘೋಷಣೆ ಮಾಡಬೇಕು. ಬಿಜೆಪಿ ಹಾಗೂ ಆರ್​ಎಸ್​ಎಸ್‌ನವರು ಭಯೋತ್ಪಾದಕರು. ಬಿಜೆಪಿಯವರಿಗೆ ಮುಸ್ಲಿಮರು ಅಂದರೆ ಉರಿ. ದೇಶದಲ್ಲಿ ಮುಸ್ಲಿಮರು ಇರಬಾರದು ಅನ್ನೋದು ಬಿಜೆಪಿ ಮನಸ್ಥಿತಿ ಬಿಜೆಪಿಯ ದೊಡ್ಡ ಮಟ್ಟದ ನಾಯಕರಿಗೆ ಮುಸ್ಲಿಮರ ಜೊತೆ ವ್ಯವಹಾರ ಇದೆ. ಬಹಿರಂಗವಾಗಿ ಸುಮ್ಮನೆ ಬಿಜೆಪಿಯವರು ನಾಟಕ ಮಾಡುತ್ತಾರೆ ಎಂದು ವಾಗ್ದಾಳಿ ಮಾಡಿದರು.