ಮನೆ ಸುದ್ದಿ ಜಾಲ ಮೇಯರ್ ಚುನಾವಣೆ ವಿಳಂಬ: ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲು ನಿರ್ಧಾರ

ಮೇಯರ್ ಚುನಾವಣೆ ವಿಳಂಬ: ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲು ನಿರ್ಧಾರ

0

ಮೈಸೂರು (Mysuru)-ಮೈಸೂರು ಮೇಯರ್ ಚುನಾವಣೆ ವಿಳಂಬ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಸರ್ಕಾರದ ವಿರುದ್ದ ಪ್ರತಿಭಟಿಸಲು ಕಾಂಗ್ರೆಸ್- ಜೆಡಿಎಸ್ ಪಾಲಿಕೆ ಸದಸ್ಯರು ಚಿಂತನೆ ನಡೆಸಿದ್ದಾರೆ.

ಪ್ರತಿಭಟನೆಗೆ ಕೆಲ ಬಿಜೆಪಿ ಸದಸ್ಯರನ್ನು ಕರೆತರಲು ಪ್ರಯತ್ನ ಮಾಡಲಾಗುತ್ತಿದೆ. ಬಜೆಟ್‌ ನಂತರ ಚುನಾವಣೆ ನಡೆಯಬೇಕಿತ್ತು. ಆದರೆ ಈವರೆಗೂ ಚುನಾವಣೆ ನಡೆದಿಲ್ಲ. ಹೀಗಾಗಿ ಪಕ್ಷಾತೀತವಾಗಿ ಸರ್ಕಾರದ ವಿರುದ್ದ ಪ್ರತಿಭಟಿಸಲು ನಿರ್ಧರಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆ ನಡೆದರೂ ಮೈಸೂರು ಪಾಲಿಕೆಗೆ ಚುನಾವಣೆ ನಡೆದಿಲ್ಲ. ಬಿಜೆಪಿಗರು ಸೋಲಿನ ಭೀತಿಯಲ್ಲಿದ್ದಾರೆ ಹೀಗಾಗಿ ಚುನಾವಣೆ ನಡೆಸಲು ವಿಳಂಬ ನಡೆಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಈ ಬಗ್ಗೆ ಮಾತನಾಡಿರುವ ಜೆಡಿಎಸ್ ಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್, ಜಿಲ್ಲಾ ಉಸ್ತುವಾರಿ ಸಚಿವರು ಬಜೆಟ್‌ ನಂತರ ಚುನಾವಣೆ ಎಂದಿದ್ದರು. ಆದರೆ ಚುನಾವಣೆ ನಡೆದಿಲ್ಲ. ಬಿಜೆಪಿ ನಾಯಕರು ಅಧಿಕಾರಕ್ಕೆ ಅಂಟಿಕೊಂಡು ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.