ಮನೆ ರಾಜ್ಯ `ಮನೆಗೆಲಸದ ಹೆಣ್ಣುಮಗಳು’ ಕವಿತೆ ವಾಪಸ್ ಪಡೆದ ಎಸ್‌ಜಿ ಸಿದ್ದರಾಮಯ್ಯ

`ಮನೆಗೆಲಸದ ಹೆಣ್ಣುಮಗಳು’ ಕವಿತೆ ವಾಪಸ್ ಪಡೆದ ಎಸ್‌ಜಿ ಸಿದ್ದರಾಮಯ್ಯ

0

ಬೆಂಗಳೂರು(Bengaluru): ಪಠ್ಯ ಪುಸ್ತಕದಲ್ಲಿ ತಮ್ಮ ಕವಿತೆಯನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಕವಿ ಎಸ್.ಜಿ. ಸಿದ್ದರಾಮಯ್ಯ ವಾಪಸ್ ಪಡೆದಿದ್ದೇನೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ.

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿರೋಧಿಸಿ ಜಿ.ರಾಮಕೃಷ್ಣ ಹಾಗೂ ದೇವನೂರ ಮಹದೇವ ಅವರು ತಾವು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದರು.

ಈ ಸಾಲಿಗೆ ಸೇರಿರುವ ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು,  ಮನೆಗೆಲಸದ ಹೆಣ್ಣುಮಗಳು’ ಎಂಬ ನನ್ನ ಕವಿತೆ 9ನೇ ತರಗತಿಯ ದ್ವಿತೀಯ ಭಾಷಾ ಪಠ್ಯವಾಗಿ ಸೇರಿದೆ. ಅದನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದೇನೆ‘ ಎಂದು ತಿಳಿಸಿದ್ದಾರೆ.

ರಾಷ್ಟ್ರ ಕವಿ ಜಿ.ಎಸ್‌.ಶಿವರುದ್ರಪ್ಪ ಪ್ರತಿಷ್ಠಾನಕ್ಕೆ ರಾಜೀನಾಮೆ:

ಬಿಜೆಪಿ ಸರ್ಕಾರವು ಕೋಮು ದ್ವೇಷವನ್ನು ರಾಜಾರೋಷವಾಗಿ ಬಿತ್ತುತ್ತಿದೆ ಆಟಾಟೋಪ ಮಾಡುವವರ ಮೇಲೆ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ  ರಾಷ್ಟ್ರ ಕವಿ ಜಿ.ಎಸ್‌.ಶಿವರುದ್ರಪ್ಪ ಪ್ರತಿಷ್ಠಾನಕ್ಕೆ,  ಪ್ರತಿಷ್ಠಾನದ ಅಧ್ಯಕ್ಷರಾದ ಎಸ್‌.ಜಿ.ಸಿದ್ದರಾಮಯ್ಯ ರವರು ರಾಜೀನಾಮೆ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಎಸ್‌.ಜಿ.ಸಿದ್ದರಾಮಯ್ಯ ರವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸದಸ್ಯ ಸ್ಥಾನಕ್ಕೆ ಹೆಚ್‌.ಎಸ್‌.ರಾಘವೇಂದ್ರ ರಾವ್‌, ನಟರಾಜು ಬೂದಾಳು, ಚಂದ್ರಶೇಖರ ನಂಗೇಲಿ ರಾಜೀನಾಮೆ ನೀಡಿದ್ದಾರೆ.