ಶ್ರೀನಗರ(Shreenagar) : ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗಿರುವ ಬೆನ್ನಲ್ಲೇ ಇಂದು ಹಿಂದೂ ಶಿಕ್ಷಕಿಯೊಬ್ಬರು ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ್ ಶಿಕ್ಷಕಿಯನ್ನು ಕೆಲವು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದು, ನಂತರ ದಾಳಿಕೋರರು ಪರಾರಿಯಾಗಿದ್ದಾರೆಂದು ಪೊಲೀಸರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ಆಕೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಶಿಕ್ಷಕಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ದಾಳಿಯ ನಂತರ, ದಾಳಿಕೋರರನ್ನು ಹಿಡಿಯಲು ಇಡೀ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ. ಆದರೆ ಭಯೋತ್ಪಾದಕರು ಇನ್ನೂ ಗುರುತಿಸಲ್ಪಟ್ಟಿಲ್ಲ. ಆದರೆ ಅವರು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೋರಾ ಪ್ರದೇಶಕ್ಕೆ ಸೇರಿದವರು ಎಂದು ಹೇಳಲಾಗುತ್ತಿದೆ.