ಮನೆ ಭಾಷೆ ಕವಿತೆ, ಲಲಿತಾ ಪ್ರಬಂಧ ಹಿಂಪಡೆಯಲು ಶಿಕ್ಷಣ ಸಚಿವರಿಗೆ ಪತ್ರ ಬರೆದ ಮೂಡ್ನಾಕೂಡು ಚಿನ್ನಸ್ವಾಮಿ

ಕವಿತೆ, ಲಲಿತಾ ಪ್ರಬಂಧ ಹಿಂಪಡೆಯಲು ಶಿಕ್ಷಣ ಸಚಿವರಿಗೆ ಪತ್ರ ಬರೆದ ಮೂಡ್ನಾಕೂಡು ಚಿನ್ನಸ್ವಾಮಿ

0

ಬೆಂಗಳೂರು(Bengaluru): ಪಠ್ಯ ಪುಸ್ತಕದಲ್ಲಿ ಕವಿತೆ ಹಾಗೂ ಲಲಿತಾ ಪ್ರಬಂಧವನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಕವಿ ಮೂಡ್ನಾಕೂಡು ಚಿನ್ನಸ್ವಾಮಿ ವಾಪಸ್ ಪಡೆದಿದ್ದಾರೆ.

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿರೋಧಿಸಿ ಮೂಡ್ನಾಕೂಡು ಚಿನ್ನಸ್ವಾಮಿ ಅನುಮತಿ ಹಿಂಪಡೆದಿದ್ದಾರೆ.

ಮೂಡ್ನಾಕೂಡು ಚಿನ್ನಸ್ವಾಮಿ ಅವರು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಗೆ ಪತ್ರ ಬರೆದು ಈ ವಿಷಯ ತಿಳಿಸಿದ್ದಾರೆ.

5ನೇ ತರಗತಿಗೆ ಪಠ್ಯವಾಗಿರುವ `ನನ್ನ ಕವಿತೆಗೆ’ ಎಂಬ ಕವನವನ್ನು ಮೂಡ್ನಾಕೂಡು ಚಿನ್ನಸ್ವಾಮಿ ಹಿಂಪಡೆದಿದ್ದಾರೆ.

ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್‌ ಅವರಿಗೆ ಪತ್ರ ಬರೆದಿರುವ ಅವರು ಪಠ್ಯ ಬೋದಿಸಲು ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದೇವೆ ಎಂದು ಹೇಳಿದ್ದಾರೆ.