ಮನೆ ಸ್ಥಳೀಯ ಅರ್ಥಪೂರ್ಣವಾಗಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ: ಡಾ. ಪಿ ಶಿವರಾಜ್

ಅರ್ಥಪೂರ್ಣವಾಗಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ: ಡಾ. ಪಿ ಶಿವರಾಜ್

0

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜ್ ಅವರು ತಿಳಿಸಿದರು.

Join Our Whatsapp Group

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಒವೆಲ್ ಮೈದಾನದಲ್ಲಿ ಆಚರಣೆ ಮಾಡಲಾಗುವುದು. ಅಂದು ಬೆಳಗ್ಗೆ 8 ಗಂಟೆಗೆ ಅರಮನೆ ಆವರಣದಲ್ಲಿ ಇರುವ ಶ್ರೀ ಭುವನೇಶ್ವರಿ ದೇವಿಗೆ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸುವರು. ನಂತರ ಓವಲ್ ಮೈದಾನದಲ್ಲಿ ಸಚಿವರು ಬೆಳಗ್ಗೆ 9.00 ಗಂಟೆಗೆ ಧ್ವಜಾರೋಹಣ ನೆರವೇರಿಸುವರು ಎಂದು ಮಾಹಿತಿ ನೀಡಿದರು.

ಮೆರವಣಿಗೆಯು ಅರಮನೆ ಆವರಣದಿಂದ ಹೊರಟು ಕಾರ್ಯಕ್ರಮ ಸ್ಥಳಕ್ಕೆ  ಬರುವುದು. ಮೆರವಣಿಗೆಯಲ್ಲಿ ಕಲಾತಂಡಗಳು ಭಾಗವಹಿಸುವವವು. ಅಗತ್ಯ ಕಲಾ ತಂಡಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನೀಡುವರು. ಮೆರವಣಿಗೆಗೆ 6 ಸ್ಥಬ್ದ ಚಿತ್ರಗಳು ಭಾಗವಹಿಸುವವು ಎಂದು ತಿಳಿಸಿದರು.

 ಆಹ್ವಾನ ಪತ್ರಿಕೆಯನ್ನು ಶಿಷ್ಟಾಚಾರ ಅನ್ವಯ ಮುದ್ರಿಸಿ ಜನಪ್ರತಿನಿಧಿಗಳು, ಗಣ್ಯರು  ಹಾಗೂ ಸಂಘ ಸಂಸ್ಥೆಗಳಿಗೆ ವಿತರಿಸಲಾಗುವುದು. ಸಂಜೆ 6 ಗಂಟೆಗೆ ಕಲಾ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬದಿಗಳು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಕಳೆದ ಶೈಕ್ಷಣಿಕ  ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ ಗೌರವಾನ್ವಿತರಿಗೆ ಸನ್ಮಾನ ಮಾಡಲಾಗುವುದು ಎಂದರು

ಕನ್ನಡ ಸಂಘಟನೆಗಳ ಮುಖಂಡರು  ಮಾತನಾಡಿ ಸಾಧಕರ ಆಯ್ಕೆಯಲ್ಲಿ ನಿರ್ದಿಷ್ಟ ಮಾನದಂಡ ಇಟ್ಟುಕೊಳ್ಳಬೇಕು. ಎಲ್ಲಾ ಸಂಘ ಸಂಸ್ಥೆಗಳವರಿಗೆ ಮುಖಂಡರಿಗೆ ಕನ್ನಡದ ಬ್ಯಾಡ್ಜ್ ಹಾಗೂ ಶಾಲು ನೀಡಬೇಕು. ಶೇಕಡಾ 60 ಕನ್ನಡ ಬಳಕೆ ಎಲ್ಲಾ ಕಡೆ ಆಗಬೇಕು. ಎಲ್ಲಾ ಅಂಗಡಿಗಳು ಹಾಗೂ ಮಳಿಗೆಗಳ ಬೋರ್ಡ್ ಗಳಲ್ಲಿ 60 ರಷ್ಟು ಕನ್ನಡ ಬಳಕೆ ಆಗಬೇಕು. ಸಾಧಕರ ಆಯ್ಕೆಯಲ್ಲಿ ಕ್ರೀಡಾ ಕ್ಷೇತ್ರದ ಸಾಧಕರನ್ನು ಹೊರತುಪಡಿಸಿ ಕನಿಷ್ಠ ವಯಸ್ಸನ್ನು ನಿಗದಿಪಡಿಸಬೇಕು. ಮರಗಳಿಗೆ ಪ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ಅಳವಡಿಸುವುದನ್ನು ನಿಷೇಧಿಸಬೇಕು. ಅರಸು ರಸ್ತೆಯಲ್ಲಿ ಮೈಸೂರು ಟಾರ್ಪಲಿಯನ್ಸ್ ನವರು ದೊಡ್ಡದಾಗಿ ಬೋರ್ಡ್ ಹಾಕಿದ್ದಾರೆ. ಆದ್ದರಿಂದ ಏಕ ರೂಪ ಬೋರ್ಡ್ ವ್ಯವಸ್ಥೆ ಮಾಡಬೇಕು. ಮೈಸೂರು ಚಲನಚಿತ್ರ ಮಂದಿರಗಳಲ್ಲಿ ನವೆಂಬರ್ ಒಂದರಿಂದ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರ ಪ್ರದರ್ಶನಗಳು ಆಗಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ ಕೆ ಹರೀಶ್, ಕನ್ನಡ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.