ಮನೆ ರಾಷ್ಟ್ರೀಯ ಕರ್ನಾಟಕದ 641 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ

ಕರ್ನಾಟಕದ 641 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ

0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಗರಣಗಳ ಮಧ್ಯೆ ಇತ್ತೀಚೆಗೆ ಬೈಎಲೆಕ್ಷನ್ ಘೋಷಣೆ ಮಾಡಲಾಗಿತ್ತು. ಚುನಾವಣೆ ಘೋಷಣೆ ಆಗಿದ್ದೇ ತಡ ಮೂರು ಪಕ್ಷಗಳು ರಣತಂತ್ರ ಆರಂಭಿಸಿವೆ. ಇದರ ಮಧ್ಯೆ ಕರ್ನಾಟಕದ 531 ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ರಾಜ್ಯ ಚುನಾವಣಾ ಉಪ ಚುನಾವಣೆ ಘೋಷಣೆ ಮಾಡಲಾಗಿದೆ.

Join Our Whatsapp Group

ನವೆಂಬರ್ 21 ರಂದು ಮತದಾನ ನಡೆಯಲಿದ್ದು, ನವೆಂಬರ್ 26 ರಂದು ಮತ ಎಣಿಕೆ ನಡೆಯಲಿದೆ.

ಕರ್ನಾಟಕದ ಮೂರು ಕ್ಷೇತ್ರಗಳು ಸೇರಿ ವಿವಿಧ ರಾಜ್ಯಗಳ 47 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಭಾರಿ ಕುತೂಹಲ ಕೆರಳಿಸಿರುವ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಉಪಚುನಾವಣೆ ದಿನಾಂಕವನ್ನ ಕೇಂದ್ರ ಚುನಾವಣಾ ಆಯೋಗ ಇತ್ತೀಚೆಗೆ ಘೋಷಿಸಿದೆ.

ನ.13ರಂದು ಎಲೆಕ್ಷನ್: ನ.23ಕ್ಕೆ ಮತಎಣಿಕೆ

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆಯು ಪ್ರಕಟವಾಗಲಿದೆ. ಇನ್ನು ಅಕ್ಟೋಬರ್ 25ರಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಅಕ್ಟೋಬರ್​ 28ರಂದು 3 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆಗೆ ಅವಕಾಶ ಇದೆ. ನ.23ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ ಫಲಿತಾಂಶ ಹೊರಬೀಳಲಿದೆ.