ನವದೆಹಲಿ (New Delhi)- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿ ನ್ಯಾಯಾಲಯ ಮಂಗಳವಾರ ಡಿ.ಕೆ.ಶಿವಕುಮಾರ್ (D.K.Shivakumar) ಸಮನ್ಸ್ ನೀಡಿದೆ.
ಜುಲೈ 1 ರಂದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ನ್ಯಾಯಾಧೀಶ ವಿಕಾಸ್ ಧುಲೆ ನಿರ್ದೇಶಿಸಿದ್ದಾರೆ. ಡಿ.ಕೆ.ಶಿವಕುಮಾರ್ ಸೇರಿದಂತೆ 5 ಮಂದಿಯ ವಿರುದ್ಧ ವಿಶೇಷ ಪ್ರಾಸಿಕ್ಯೂಟರ್ ನಿತೇಶ್ ರಾಣಾ ಅವರ ಮೂಲಕ ಇಡಿ ಸಲ್ಲಿಸಿದ ಜಾರ್ಜ್ ಶೀಟ್ ಅನ್ನು ಪರಿಗಣಿಸಿದ ನಂತರ ಕೋರ್ಟ್ ಈ ಆದೇಶ ನೀಡಿದೆ.
ಡಿಕೆಶಿ ಸೇರಿ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಚಾರ್ಜ್ಶೀಟ್ ಸಲ್ಲಿಕೆ ಬಳಿಕ ಕೋರ್ಟ್ನಿಂದ ಸಮನ್ಸ್ ಜಾರಿಯಾಗಿದೆ.
ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಕೋರ್ಟ್‌ನ ಲ್ಲಿ ಮೇ 28 ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ವಿಕಾಸ್ ಧುಲೆ ಅವರ ಪೀಠದಲ್ಲಿ ವಿಚಾರಣೆ ನಡೆದಿದ್ದು, ವಾದವನ್ನು ಆಲಿಸಿದ ಇಡಿ ವಿಶೇಷ ನ್ಯಾಯಾಲಾಯ ವಿಚಾರಣೆಯನ್ನು ಮೇ 31ಕ್ಕೆ ವಿಚಾರಣೆ ಮುಂದೂಡಿದ್ದರು. ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಡಿಕೆಶಿಗೆ ಸಮನ್ಸ್ ನೀಡಿದೆ.
ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಈ ಹಿಂದೆ 2019, ಸೆಪ್ಟೆಂಬರ್ ನಲ್ಲಿ ಡಿಕೆಶಿ ಅವರನ್ನು ಇಡಿ ಬಂಧಿಸಿತ್ತು. ನಂತರ 2019, ಅಕ್ಟೋಬರ್ 23 ರಂದು ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.