ಮನೆ ಸುದ್ದಿ ಜಾಲ ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಅರಮನೆ ಆವರಣದಲ್ಲಿ ಸಿದ್ಧತೆ ಪರಿಶೀಲಿಸಿದ ಸಂಸದ ಪ್ರತಾಪ್‌ ಸಿಂಹ

ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಅರಮನೆ ಆವರಣದಲ್ಲಿ ಸಿದ್ಧತೆ ಪರಿಶೀಲಿಸಿದ ಸಂಸದ ಪ್ರತಾಪ್‌ ಸಿಂಹ

0

ಮೈಸೂರು (Mysuru)-ಜೂನ್‌ 21 ರಂದು ಮೈಸೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಇಂದು ಮೈಸೂರು ಅರಮನೆ ಆವರಣದಲ್ಲಿ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.

ಅರಮನೆ ಆಡಳಿತ ಮಂಡಳಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಅರಮನೆ ಆವರಣದಲ್ಲಿ ಆಗಬೇಕಿರುವ ವ್ಯವಸ್ಥೆಗಳ ಬಗ್ಗೆ ಚರ್ಚಿಸಿದರು.

ಬಳಿಕ ಮಾತನಾಡಿದ ಅವರು, ಅರಮನೆಯಲ್ಲಿ ಸಿದ್ಧತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಪ್ರಧಾನಿ ಆಗಮನದ ಸ್ಥಳಗಳಲ್ಲಿ ಸ್ವಚ್ಚತೆ ಬಗ್ಗೆ ಕ್ರಮಗಳು ಕೈಗೊಳ್ಳಲಾಗುತ್ತಿದೆ. ವಿಮಾನ ನಿಲ್ದಾಣದಿಂದ ರ್‍ಯಾಡಿಷನ್ ಬ್ಲೂ, ಲಲಿತ್‌ಮಹಲ ಸೇರಿದಂತೆ ಸ್ಥಳಗಳ ಭದ್ರತೆ ಬಗ್ಗೆ ಚರ್ಚೆ ನಡೆಯಿತು. ಅಂತಿಮವಾಗಿ ಎಸ್‌ಪಿಜಿ ನೀಡುವ ಮಾರ್ಗಸೂಚಿ ಅನ್ವಯ ತೀರ್ಮಾನಿಸಲಾಗುತ್ತದೆ ಎಂದರು.

ಮೋದಿ ಅವರು ಯೋಗಾ ಕಾರ್ಯಕ್ರಮದ ಜತೆಗೆ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಸುತ್ತೂರು ಶ್ರೀಗಳು ಕೂಡ ಮಠಕ್ಕೆ ಭೇಟಿ ಕೊಡುವಂತೆ ಕೇಳಿದ್ದಾರೆ. ಅಂತಿಮವಾಗಿ ಪ್ರಧಾನಿಗಳ ಭದ್ರತೆ ನೋಡಿಕೊಂಡು ತೀರ್ಮಾನ ಮಾಡಲಾಗುತ್ತೆ ಎಂದು ತಿಳಿಸಿದರು.

ವಿಶ್ವ ಯೋಗ ದಿನ ಸಂಪೂರ್ಣ ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದೆ. ರಾಜ್ಯ ಸರ್ಕಾರ, ಜಿಲ್ಲಾಡಳಿತ ಅಗತ್ಯ ಸಹಕಾರ ನೀಡಲಿದೆ. ಗಿನ್ನಿಸ್ ರೆಕಾರ್ಡ್‌ಗಾಗಿ ಯೋಗ ಮಾಡುತ್ತಿಲ್ಲ. ರೆಕಾರ್ಡ್ ಮುಂದಿನ ವರ್ಷವೂ ರೆಕಾರ್ಡ್ ಮಾಡಬಹುದು. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಅಚ್ಚುಕಟ್ಟಾಗಿ ಯೋಗ ಕಾರ್ಯಕ್ರಮ ಸಂಘಟಿಸಬೇಕಾಗಿದೆ ಎಂದು ನುಡಿದರು.

ಇನ್ನು ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ 43.5 ಕಿ.ಮೀ ರಿಂಗ್ ರಸ್ತೆಯನ್ನು ಸ್ವಚ್ಛಗೊಳಿಸುವ ಕಾರ್ಯ ಆರಂಭವಾಗಿದೆ. ಡಬ್ರೀಸ್ & ಕಸ ಎಲ್ಲವನ್ನು ಕೂಡ ಸ್ವಚ್ಛಗೊಳಿಸಲಾಗುವುದು. ಅನಧಿಕೃತ ಅಂಗಡಿಗಳನ್ನು ತೆರವು ಮಾಡಲಾಗುವುದು. ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಿದ್ದಾರೆ.

ತನ್ನ ವಿರುದ್ದ ಕೂಗು ಮಾರಿಗಳನ್ನು ಬಿಟ್ಟಿರೆ ಎಂಬ ಸಿದ್ದು ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ಅತಿ ದೊಡ್ಡ ಕೂಗುಮಾರಿ ಅಂದ್ರೆ ಅದು ಸಿದ್ದರಾಮಯ್ಯ. ದಿನ ಬೆಳಗೆದ್ದು ಅರುಚುತ್ತಲೆ ಇರುತ್ತಾರೆ. ದಿನಾ ಮಾತಾಡೊರನ್ನೇ ಕೂಗುಮಾರಿ ಅನ್ನೋದು ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ನಗರಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಇತರರು ಉಪಸ್ಥಿತರಿದ್ದರು.