ಮೈಸೂರು: ನವೆಂಬರ್ 11 ರಂದು ರಂದು ಬೆಳಗ್ಗೆ 11.30 ಗಂಟೆಗೆ ಕರ್ನಾಟಕದ ಕಲಾಮಂದಿರದ ಕಿರುರಂಗಮoದಿರದಲ್ಲಿ “ಒನಕೆ ಓಬವ್ವ ಜಯಂತಿ” ಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ ಶಿವರಾಜು ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ “ಒನಕೆ ಓಬವ್ವ ” ಜಯಂತಿಯ ಆಚರಣೆಯ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒನಕೆ ಓಬವ್ವ ಇಂದು ಮಹಿಳಾ ಸಮಾಜಕ್ಕೆ ಮಾದರಿಯಾಗಿದ್ದಾರೆ. ದೈಹಿಕವಾಗಿ ಮಾನಸಿಕವಾಗಿ ತನ್ನನ್ನು ತಾನು ಪುರುಷರಿಗಿಂತ ಯಾವುದೇ ವಿಷಯದಲ್ಲಿ ಕಡಿಮೆ ಇಲ್ಲ ಇಂದು ಸಾಬೀತು ಪಡಿಸಿದ ವೀರ ವನಿತೆ. ಅಂತಹ ಸಾಧಕಿಯ ಜಯಂತಿಯನ್ನು ಆಚರಿಸುವುದು ನಮ್ಮ ನಾಡಿಗೆ ಹೆಮ್ಮೆ ತರುತ್ತದೆ ಎಂದರು.
ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬoಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಿ, ಜಯಂತಿ ನಡೆಯುವ ಸ್ಥಳದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ. ಡಿ ಸುದರ್ಶನ್ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ಕಲಾತಂಡಗಳಿಂದ ಗೀತ ಗಾಯನವನ್ನು ಏರ್ಪಡಿಸಲಾಗುವುದು. ಆಹ್ವಾನ ಪತ್ರಿಕೆಯ ಮುದ್ರಣ ಮಾಡಿ ಸರ್ಕಾರದ ಶಿಷ್ಟಾಚಾರದಂತೆ ಜನ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈ ಸಂಬoಧ ಸಮಿತಿಯವರು ಸಹಕರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಒನಕೆ ಓಬವ್ವ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.