ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರು ಇಬ್ಬರು ವಿಲೇಜ್ ಡಿಫೆನ್ಸ್ ಗ್ರೂಪ್ (ವಿಡಿಜಿ) ಸದಸ್ಯರನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ. ಜೈಶ್-ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಮೃತರನ್ನು ಓಹ್ಲಿ ಕುಂಟ್ವಾರ ಗ್ರಾಮದ ನಿವಾಸಿಗಳಾದ ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಎಂದು ಗುರುತಿಸಲಾಗಿದೆ.
ಮೃತದೇಹಗಳ ಪತ್ತೆಗೆ ಪೊಲೀಸರು ಭಾರೀ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ನಜೀರ್ ಮತ್ತು ಕುಲದೀಪ್ ಇಬ್ಬರೂ ತಮ್ಮ ಜಾನುವಾರುಗಳನ್ನು ಮೇಯಿಸಲು ಕಾಡಿನಲ್ಲಿ ಹೋದಾಗ ಭಯೋತ್ಪಾದಕರು ಅಪಹರಿಸಿದ್ದಾರೆ. ನನ್ನ ಸಹೋದರ ಮತ್ತು ಅಹ್ಮದ್ ಅವರನ್ನು ಭಯೋತ್ಪಾದಕರು ಅಪಹರಿಸಿ ಕೊಂದಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ ಎಂದರು.
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಹತ್ಯೆಗಳನ್ನು ಖಂಡಿಸಿದ್ದಾರೆ. ಇಂತಹ ಬರ್ಬರ ಹಿಂಸಾಚಾರದ ಕೃತ್ಯಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ದೀರ್ಘಕಾಲೀನ ಶಾಂತಿಯನ್ನು ಸಾಧಿಸುವಲ್ಲಿ ಗಮನಾರ್ಹ ಅಡಚಣೆಯಾಗಿವೆ ಎಂದು ಬರೆದಿದ್ದಾರೆ.
ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುರುವಾರ ಬಾರಾಮುಲ್ಲಾ ಮತ್ತು ಸೋಪೋರ್ ಜಿಲ್ಲೆಗಳಲ್ಲಿ ಎನ್ಕೌಂಟರ್ ಕೂಡ ಸಂಭವಿಸಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಎನ್ಕೌಂಟರ್ ನಡೆದ ಸ್ಥಳದಿಂದ ಎಕೆ ರೈಫಲ್, ಎರಡು ಹ್ಯಾಂಡ್ ಗ್ರೆನೇಡ್ ಗಳು ಮತ್ತು ನಾಲ್ಕು ಎಕೆ ರೈಫಲ್ ಮ್ಯಾಗಜೀನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.