ಮನೆ ಕ್ರೀಡೆ WTC Final: ಹೀಗಾದ್ರೆ ಮಾತ್ರ ಟೀಮ್ ಇಂಡಿಯಾ ಫೈನಲ್​ಗೆ​ ಪ್ರವೇಶಿಸುತ್ತೆ..!

WTC Final: ಹೀಗಾದ್ರೆ ಮಾತ್ರ ಟೀಮ್ ಇಂಡಿಯಾ ಫೈನಲ್​ಗೆ​ ಪ್ರವೇಶಿಸುತ್ತೆ..!

0

Team India: ನ್ಯೂಝಿಲೆಂಡ್ ವಿರುದ್ಧದ ಸರಣಿಯನ್ನು 3-0 ಅಂತರದಿಂದ ಸೋತಿರುವ ಟೀಮ್ ಇಂಡಿಯಾ ಇದೀಗ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಅಮೋಘ ಗೆಲುವು ಸಾಧಿಸಿದರೆ ಮಾತ್ರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

Join Our Whatsapp Group

Description: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಲು ಟೀಮ್ ಇಂಡಿಯಾಗೆ ಉಳಿದಿರುವುದು ಒಂದೇ ಅವಕಾಶ. ಈ ಒಂದು ಅವಕಾಶದೊಂದಿಗೆ ಹಲವು ಆಯ್ಕೆಗಳಿವೆ. ಅಂದರೆ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅಮೋಘ ಗೆಲುವು ಸಾಧಿಸಿದರೆ ಮಾತ್ರ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು. ಇದರ ಹೊರತಾಗಿ ಭಾರತದ ಮುಂದಿರುವ ಆಯ್ಕೆಗಳಾವುವು ಎಂದು ನೋಡುವುದಾದರೆ...

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಲು ಟೀಮ್ ಇಂಡಿಯಾಗೆ ಉಳಿದಿರುವುದು ಒಂದೇ ಅವಕಾಶ. ಈ ಒಂದು ಅವಕಾಶದೊಂದಿಗೆ ಹಲವು ಆಯ್ಕೆಗಳಿವೆ. ಅಂದರೆ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅಮೋಘ ಗೆಲುವು ಸಾಧಿಸಿದರೆ ಮಾತ್ರ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು. ಇದರ ಹೊರತಾಗಿ ಭಾರತದ ಮುಂದಿರುವ ಆಯ್ಕೆಗಳಾವುವು ಎಂದು ನೋಡುವುದಾದರೆ…

5-0 ಅಥವಾ 4-0: ಭಾರತ ತಂಡವು ಆಸ್ಟ್ರೇಲಿಯಾವನ್ನು 5-0 ಅಥವಾ 4-0 ಅಂತರದಿಂದ ಮಣಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವುದು ಖಚಿತವಾಗಲಿದೆ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾ ಯಾವುದೇ ಪಂದ್ಯವನ್ನು ಸೋಲಬಾರದು. ಅಂದರೆ 5 ಮ್ಯಾಚ್​ಗಳ ಸರಣಿಯಲ್ಲಿ 4 ಜಯ ಹಾಗು 1 ಡ್ರಾ ಸಾಧಿಸುವುದು ಅನಿವಾರ್ಯ. ಒಂದು ವೇಳೆ ಸೋತರೆ…

4-1, 3-1, 3-0: ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿ ಗೆದ್ದರೆ ಅಥವಾ 3-1, 3-0 ಅಂತರದಿಂದ ಜಯ ಸಾಧಿಸಿದರೆ, ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಇಲ್ಲಿ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ಒಂದು ಪಂದ್ಯದಲ್ಲಿ ಡ್ರಾ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ 4-1, 3-1, 3-0 ಅಂತರದಿಂದ ಗೆದ್ದರೂ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಲಿದೆ.

2-0: ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 2 ಪಂದ್ಯಗಳಲ್ಲಿ ಜಯ ಸಾಧಿಸಿ, 3 ಮ್ಯಾಚ್​ಗಳನ್ನು ಡ್ರಾ ಮಾಡಿಕೊಂಡರೂ, ಫೈನಲ್​ ಪ್ರವೇಶಿಸಲು ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳ ಫಲಿತಾಂಶ ಪ್ರಮುಖ ಪಾತ್ರವಹಿಸಲಿದೆ. ಇಲ್ಲಿ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ವಿರುದ್ಧ 1 ಜಯ ಸಾಧಿಸುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯವಾಗಲಿದೆ. ಇದರಿಂದ ಕಿವೀಸ್ ಪಡೆಯನ್ನು ಹಿಂದಿಕ್ಕಿ ಭಾರತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

3-2: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ 3-2 ಅಂತರದಿಂದ ಜಯ ಸಾಧಿಸಿದರೆ, ಎರಡು ತಂಡಗಳ ಫಲಿತಾಂಶ ನಿರ್ಣಾಯಕವಾಗಲಿದೆ. ಅಂದರೆ ಇಲ್ಲಿ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ವಿರುದ್ಧ 1 ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಬೇಕು. ಹಾಗೆಯೇ ಶ್ರೀಲಂಕಾ ತಂಡವು ಆಸ್ಟ್ರೇಲಿಯಾ ವಿರುದ್ಧ ಒಂದು ಟೆಸ್ಟ್​ನಲ್ಲಿ ಡ್ರಾ ಸಾಧಿಸುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯವಾಗಲಿದೆ.

2-1, 1-1, 1-0: ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 2-1 ಅಥವಾ 1-0 ಅಂತರದಿಂದ ಸರಣಿ ಗೆದ್ದರೆ ಅಥವಾ 1-1 ಅಂತರದಿಂದ ಸರಣಿಯನ್ನು ಡ್ರಾ ಮಾಡಿಕೊಂಡರೆ, ನ್ಯೂಝಿಲೆಂಡ್ ಇಂಗ್ಲೆಂಡ್ ವಿರುದ್ಧ ಕೇವಲ 1 ಟೆಸ್ಟ್ ಪಂದ್ಯದಲ್ಲಿ ಮಾತ್ರ ಗೆಲ್ಲುವುದನ್ನು ಎದುರು ನೋಡಬೇಕು. ಹಾಗೆಯೇ ಶ್ರೀಲಂಕಾ ತಂಡವು ಆಸ್ಟ್ರೇಲಿಯಾ ವಿರುದ್ಧ ಒಂದು ಟೆಸ್ಟ್​ನಲ್ಲಿ ಡ್ರಾ ಸಾಧಿಸುವುದು ​ಭಾರತದ ಪಾಲಿಗೆ ಅನಿವಾರ್ಯ.

2-2: ಒಂದು ವೇಳೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು 2-2 ಅಂತರದಲ್ಲಿ ಅಂತ್ಯಗೊಂಡರೆ, ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಭವಿಷ್ಯವನ್ನು ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಿರ್ಧರಿಸಲಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ಒಂದು ಟೆಸ್ಟ್ ಗೆಲ್ಲಬೇಕು. ಹಾಗೆಯೇ ಆಸ್ಟ್ರೇಲಿಯಾ ತಂಡವನ್ನು ಶ್ರೀಲಂಕಾ ಒಂದು ಟೆಸ್ಟ್​ನಲ್ಲಿ ಸೋಲಿಸುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯವಾಗಲಿದೆ.

2-3: ಭಾರತದ ವಿರುದ್ಧ ಆಸ್ಟ್ರೇಲಿಯಾ 2-3 ಅಂತರದಿಂದ ಸರಣಿ ಗೆದ್ದರೆ, ಮೂರು ಸರಣಿಗಳ ಫಲಿತಾಂಶದ ಬಳಿಕ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಭವಿಷ್ಯ ನಿರ್ಧಾರವಾಗಲಿದೆ. ಅಂದರೆ ಇಲ್ಲಿ ನ್ಯೂಝಿಲೆಂಡ್ ಇಂಗ್ಲೆಂಡ್ ವಿರುದ್ಧ ಒಂದಕ್ಕಿಂತ ಹೆಚ್ಚು ಟೆಸ್ಟ್​ ಪಂದ್ಯದಲ್ಲಿ ಗೆಲ್ಲಬಾರದು, ಸೌತ್ ಆಫ್ರಿಕಾ ಮುಂದಿನ 4 ಟೆಸ್ಟ್​ ಪಂದ್ಯಗಳಲ್ಲಿ 2 ರಲ್ಲಿ ಸೋಲಬೇಕು. ಹಾಗೆಯೇ ಶ್ರೀಲಂಕಾ ಮುಂದಿನ 4 ಪಂದ್ಯಗಳಲ್ಲಿ ಎರಡಕ್ಕಿಂತ ಹೆಚ್ಚಿನ ಪಂದ್ಯಗಳಲ್ಲಿ ಗೆಲ್ಲಬಾರದು. ಹೀಗಾದರೆ ಮಾತ್ರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.