ಮನೆ ರಾಜ್ಯ ಮಕ್ಕಳ ಸಮಸ್ಯೆ ಬಗೆಹರಿಸಲು ಸೂಕ್ತ ನಿರ್ದೇಶನ: ದತ್ತಾತ್ರೇಯ ಗಾದಾ 

ಮಕ್ಕಳ ಸಮಸ್ಯೆ ಬಗೆಹರಿಸಲು ಸೂಕ್ತ ನಿರ್ದೇಶನ: ದತ್ತಾತ್ರೇಯ ಗಾದಾ 

0

ಮೈಸೂರು: ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ,  ಜಿಲ್ಲಾಡಳಿತ ಬೀದರ್ ತಾಲೂಕು ಆಡಳಿತ ಬಸವಕಲ್ಯಾಣ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮವನ್ನು ಬಸವ ಮಹಾಮನೆ ಆವರಣದ ಬಸವಕಲ್ಯಾಣದಲ್ಲಿ ನಡೆಸಲಾಯಿತು.

Join Our Whatsapp Group

ತಹಶಿಲ್ದಾರರಾದ ದತ್ತಾತ್ರೇಯ ಗಾದಾ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸಂಸ್ಥೆಯು 9 ಗ್ರಾಮ ಪಂಚಾಯಿತಿಗಳಿಂದ 40 ಗ್ರಾಮಗಳಲ್ಲಿ ಮಕ್ಕಳ ಹಕ್ಕುಗಳ ಕುರಿತು ತುಂಬಾ ಕಾರ್ಯನಿರ್ವಹಿಸುತ್ತಿದೆ.  ಮಕ್ಕಳು ಇಂದಿನ ಈ ಕಾರ್ಯಕ್ರಮದಲ್ಲಿ ಸಮಸ್ಯೆಗಳನ್ನು ತಿಳಿಸುತ್ತಿದ್ದು,  ಅವುಗಳನು ಮುಂದಿನ ದಿನಗಳಲ್ಲಿ ಬಗೆಹರಿಸುವ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೇ ಮಾತನಾಡಿ, ನಾವು ಆಯೋಗದ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ರೀತಿ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಆದರೆ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಮಾಡುತ್ತಿರುವುದು ತುಂಬಾ ಶ್ಲಾಘನಿಯವಾಗಿದೆ. ಮಕ್ಕಳು ಇಂದು ಹೇಳಿರುವಂತಹ ಸಮಸ್ಯೆಗಳನ್ನು ಗಮನಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಸೂಕ್ತ ನಿರ್ದೇಶನವನ್ನು ನೀಡುತ್ತೇವೆ. ಸರ್ಕಾರ ಮತ್ತು ಸ್ವಯಂಸೇವಾ ಸಂಸ್ಥೆಗಳು ಈ ರೀತಿ ಮಕ್ಕಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸದಲ್ಲಿ ಮಕ್ಕಳಿಗೆ ಸಂಪೂರ್ಣವಾಗಿ ಅವರ ಹಕ್ಕುಗಳು ದೊರೆಯುವಂತಾಗುತ್ತದೆ. ಇದೊಂದು ವಿಶೇಷ ಅಭೂತಪೂರ್ವ ಕಾರ್ಯಕ್ರಮವಾಗಿದ್ದು ಮಕ್ಕಳು ಮೂಲಭೂತ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಪ್ರಶ್ನೆಗಳನ್ನು ಮಂಡಿಸಿದ್ದಾರೆ ಇದು ನಿಜಕ್ಕೂ ತುಂಬಾ ಶೋಚನೀಯವಾಗಿದೆ. ಸ್ವತಂತ್ರ ಬಂದು 75 ವರ್ಷ ಸಂಪೂರ್ಣಗೊಂಡಿದ್ದರು ಸಹ ಇಂದಿಗೂ ಇಂತಹ ಸಮಸ್ಯೆಗಳು ಜೀವಂತವಾಗಿರುವುದು ತುಂಬಾ ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಆರಕ್ಷಕ ವೃತ ನಿರೀಕ್ಷಕರಾದ ಅಲಿಸಾಬ್ ಇವರು ಮಾತನಾಡಿ, ಮಕ್ಕಳು ಈ ಸಭೆಯಲ್ಲಿ ಎತ್ತಿರುವ ಸಮಸ್ಯೆಗಳು ತುಂಬಾ ಗಂಭೀರವಾಗಿರುವುದರಿಂದ ಅವುಗಳ ಕುರಿತು ಮುಂದಿನ ದಿನಗಳಲ್ಲಿ ತಕ್ಷಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ನಮ್ಮ ಪೊಲೀಸ್ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ಪ್ರತಿ ಹಳ್ಳಿಗಳಿಗೂ ಭೇಟಿ ಮಾಡಿ ವಂತೆ ತಿಳಿಸಲಾಗುವುದು ಮಕ್ಕಳು ಯಾವುದೇ ಸಮಸ್ಯೆಗಳು ಕಂಡು ಬಂದಾಗ ಪೊಲೀಸ್ ಇಲಾಖೆಯನ್ನು ನೇರವಾಗಿ ಸಂಪರ್ಕಿಸಬಹುದು ಯಾವುದೇ ಕಾರಣಕ್ಕೂ ಮಕ್ಕಳು ಪೊಲೀಸರಿಗೆ ಹೆದರುವ ಅವಶ್ಯಕತೆ ಇಲ್ಲ ಪೊಲೀಸ್ ಇಲಾಖೆ ಅಷ್ಟೇ ಅಲ್ಲದೆ ಇತರ ಇಲಾಖೆಗಳೊಂದಿಗೆ ಕೈಜೋಡಿಸಿ ಮಕ್ಕಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಸಭೆಯಲ್ಲಿ ತಿಳಿಸಿದರು ಹಾಗೂ ಮಕ್ಕಳು ತಮ್ಮ ಗುರಿಯನ್ನು ಸಾಧಿಸುವಲ್ಲಿ ನಿರಂತರ ಪ್ರಯತ್ನ ಬಿಡದೆ ಮುನ್ನುಗ್ಗಬೇಕು ಉತ್ತಮ ಪ್ರಜೆಯಾಗಿ ಬಾಳುವಲ್ಲಿ ಮಕ್ಕಳು ಮುಂದೆ ಬರಬೇಕು ಎಂಬ ಕಿವಿ ಮಾತನ್ನು ಹೇಳಿದರು. ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಸರಸ್ವತಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್, ಗೌತಮ್ ಶಿಂಧೆ ಶಿಶು ಅಭಿವೃದ್ಧಿ ಅಧಿಕಾರಿ, ಸಿದ್ದವೀರಯ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಸ್ಥೆಯ ಸಿಬ್ಬಂದಿಗಳಾದ ಸಂಪತ್ ಕುಮಾರ, ಶಶಿಕುಮಾರ್ ಎಸ್, ನಾಗರಾಜ ಶೀಲವಂತ ಇದ್ದರು.