ಬೆಂಗಳೂರು: ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡು ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.
ಮೃತನನ್ನು ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಅಭಿಷೇಕ್ ರಾಮಕೃಷ್ಣ ಮತ್ತು ಅನಸೂಯ ದಂಪತಿಗಳ ಪುತ್ರ. ಕುಟುಂಬದ ಆರ್ಥಿಕ ಸಹಾಯಕ್ಕಾಗಿ ಬೆಂಗಳೂರಿಗೆ ಬಂದು ಕ್ಯಾಬ್ ಚಾಲಕನ ಕೆಲಸ ಮಾಡುತ್ತಿದ್ದನು.
ಸ್ಥಳೀಯರ ಪ್ರಕಾರ, ಬಸವೇಶ್ವರ ನಗರದಲ್ಲಿನ ರಸ್ತೆ ಬದಿಯಲ್ಲಿ ನಿಂತಿದ್ದ ಅಭಿಷೇಕ್ ಅಚಾನಕರಾಗಿ ಕುಸಿದು ಬಿದ್ದಿದ್ದ. ಇದನ್ನು ಗಮನಿಸಿದ ಜನರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯೆಯೇ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.














