ರಾಮನಗರ: ಜ್ಯೂಸ್ ಎಂದು ಕೀಟನಾಶಕ ಸೇವಿಸಿದ ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.
ಯಶಾಂಕ್.ಕೆ.ಗೌಡ ಎಂಬ ಮಗು ರೇಷ್ಮೆ ಹುಳುವಿನ ಮನೆಗೆ ಸಿಂಪಡಿಸಿಲು ಮನೆಯಲ್ಲಿ ಇರಿಸಿದ್ದ ದ್ರಾವಕವನ್ನು ಜ್ಯೂಸ್ ಎಂದು ಸೇವಿಸಿದೆ.
ಅಸ್ವಸ್ಥಗೊಂಡ ಮಗುವನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.
ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.















