ಮನೆ ಸುದ್ದಿ ಜಾಲ ಅ. 28 ರಂದು ಮಣ್ಣು ಸಂಗ್ರಹ ವಾಹನಗಳಿಗೆ ಚಾಲನೆ: ಎಸ್.ಟಿ.ಸೋಮಶೇಖರ್

ಅ. 28 ರಂದು ಮಣ್ಣು ಸಂಗ್ರಹ ವಾಹನಗಳಿಗೆ ಚಾಲನೆ: ಎಸ್.ಟಿ.ಸೋಮಶೇಖರ್

0

ಮೈಸೂರು(Mysuru): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವಿತ್ರ ಮೃತ್ತಿಕಾ (ಮಣ್ಣು) ಸಂಗ್ರಹಣಾ ಅಭಿಯಾನ ನಡೆಯಲಿದ್ದು ಜಿಲ್ಲೆಯಲ್ಲಿ ಈ ಸಂಬಂಧ ಅಧಿಕಾರಿಗಳು ಸಿದ್ಧತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ ಬಿ.ಆರ್.ಪೂರ್ಣಿಮಾ ತಿಳಿಸಿದರು.
ಇಂದು ಜಿಲ್ಲಾ ಪಂಚಾಯಿತಿ ಡಾ.ದೇವರಾಜ ಅರಸು ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಿAದ ಮಣ್ಣು ಸಂಗ್ರಹ ಅಭಿಯಾನವನ್ನು ಯಶಸ್ವಿಗೊಳಿಸುವ ಬಗ್ಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 ರಾಜ್ಯದ ಪ್ರತಿ ಜಿಲ್ಲೆಗಳಿಂದ ಮಣ್ಣು ಸಂಗ್ರಹ ಅಭಿಯಾನವನ್ನು ಜಿಲ್ಲೆಯಾದ್ಯಂತ ಗೌರವಪೂರ್ವಕವಾಗಿ ನಡೆಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದ್ದು, ಮಣ್ಣು ಸಂಗ್ರಹ ಅಭಿಯಾನವನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಅತ್ಯಂತ ಗೌರವ ಪೂರ್ವಕವಾಗಿ 2022ರ ಅಕ್ಟೋಬರ್ 28 ರಿಂದ ನವಂಬರ್ 7 ರವರೆಗೆ ನಗರವ್ಯಾಪ್ತಿಯೂ ಸೇರಿದಂತೆ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಕಾರ್ಯಕ್ರಮದ ಅಂಗವಾಗಿ ಅಕ್ಟೋಬರ್ 28 ರಂದು ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನ ವಾಹನಗಳಿಗೆ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ಚಾಮುಂಡಿಬೆಟ್ಟದಲ್ಲಿ ಚಾಲನೆ ನೀಡುವರು.
ಮಣ್ಣು ಸಂಗ್ರಹ ಅಭಿಯಾನವನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಅತ್ಯಂತ ಗೌರವ ಪೂರ್ವಕವಾಗಿ 2022ರ ಅಕ್ಟೋಬರ್ 28 ರಿಂದ ನವಂಬರ್ 7 ರವರೆಗೆ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮಣ್ಣು ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ರೂಟ್ ಮ್ಯಾಪ್ ಅನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು.
ಮಣ್ಣು ಸಂಗ್ರಹಣೆಗಾಗಿ 3 ವಾಹನಗಳು ಜಿಲ್ಲೆಗೆ ಆಗಮಿಸಿದ್ದು 28 ರಂದು ಬೆಳಗ್ಗೆ 9 ಗಂಟೆಗೆ ಚಾಮುಂಡಿ ಬೆಟ್ಟದಲ್ಲಿ ಕುಂಭಮೇಳ ಕಳಸದೊಂದಿಗೆ ವಾಹನಗಳಿಗೆ ಚಾಲನೆ ನೀಡಲಾಗುವುದು ನಂತರ ಈ ವಾಹನವು ಮೈಸೂರು, ಟಿ ನರಸೀಪುರ, ನಂಜನಗೂಡು ಮಾರ್ಗದಲ್ಲಿ ಚಲಿಸಲ್ಲಿದ್ದು ಎರಡನೇ ವಾಹನ ಹುಣಸೂರು, ಎಚ್.ಡಿ.ಕೋಟೆ ಸರಗೂರು ಮಾರ್ಗದಲ್ಲಿ ಹಾಗೂ ಮೂರನೇ ವಾಹನ ಕೆ.ಆರ್.ನಗರ, ಪಿರಿಯಾಪಟ್ಟಣ, ಮಾರ್ಗದಲ್ಲಿ ಮಣ್ಣು ಸಂಗ್ರಹಣೆ ಮಾಡಿಕೊಂಡು ನಂತರ ಕೊಡಗು ತಲುಪುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಮಂಜುನಾಥ್ ಸ್ವಾಮಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪೇಮ್ ಕುಮಾರ್, ಕೃಷ್ಣರಾಜಂ, ಹಾಗೂ ಎಲ್ಲಾ ತಾಲ್ಲೂಕಿನ ತಹಶೀಲ್ದಾರ್ ಉಪಸ್ಥಿತರಿದ್ದರು.