ಮನೆ ಸುದ್ದಿ ಜಾಲ ಶಿಕ್ಷಕನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ಕ್ಲಾಸ್ ಬಾಲಕ

ಶಿಕ್ಷಕನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ಕ್ಲಾಸ್ ಬಾಲಕ

0

ಹೈದರಾಬಾದ್: ಶಾಲೆಯಲ್ಲಿ ಶಿಕ್ಷಕರು ಹೊಡೆಯುತ್ತಾರೆ ಎಂದು ಎರಡನೇ ಕ್ಲಾಸ್ ಬಾಲಕನೊಬ್ಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ.

2ನೇ ತರಗತಿ ವಿದ್ಯಾರ್ಥಿ ಅನಿಲ್ ನಾಯ್ಕ್, ಮೆಹಬೂಬ್ ನಗರದ ಖಾಸಗಿ ಶಾಲಾ ಶಿಕ್ಷಕನ ವಿರುದ್ಧ ದೂರು ನೀಡಿದ್ದು, ನನಗೆ ಶಿಕ್ಷಕರು ಶಾಲೆಯಲ್ಲಿ ಹೊಡೆಯುತ್ತಿದ್ದಾರೆ. ಅವರನ್ನು ಬಂಧಿಸುವಂತೆ ಹೇಳಿದ್ದಾನೆ. ಈ ವೇಳೆ ಮಹಿಳಾ ಇನ್ಸ್ ಪೆಕ್ಟರ್ ರಮಾದೇವಿ ವಿದ್ಯಾರ್ಥಿಯನ್ನು ವಿಚಾರಿಸಿದ್ದಾರೆ.

ಬಳಿಕ ಇನ್ಸ್ ಪೆಕ್ಟರ್ ರಮಾದೇವಿ, ವಿದ್ಯಾರ್ಥಿಯ ಜತೆ ಶಾಲೆಗೆ ತೆರಳಿ ಶಿಕ್ಷಕರನ್ನು ವಿಚಾರಿಸಿದ್ದಾರೆ. ಶಿಕ್ಷಕ ಹಾಗೂ ವಿದ್ಯಾರ್ಥಿ ಇಬ್ಬರಿಗೂ ಕೌನ್ಸೆಲಿಂಗ್ ಮಾಡಿ ಮನವೊಲಿಸಲಾಗಿದೆ.

ಹಿಂದಿನ ಲೇಖನಎನ್ಎಸ್ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ
ಮುಂದಿನ ಲೇಖನಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್