ಮನೆ ಅಪರಾಧ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ​ಗೆ ಬೈಕ್ ಡಿಕ್ಕಿ: ಮೂವರು ಸಾವು

ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ​ಗೆ ಬೈಕ್ ಡಿಕ್ಕಿ: ಮೂವರು ಸಾವು

0

ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸವಾರರು ಸಾವಿಗೀಡಾದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

Join Our Whatsapp Group

ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ರಾಠೋಡ್, ರೋಹಿತ್ ಹಾಗೂ ಕೃಷ್ಣ ಎಂಬುವರು ಲಾಡ್ಲಾಪುರ ಗ್ರಾಮದಿಂದ ತಾಂಡಾಕ್ಕೆ ಹೋಗುತ್ತಿರುವಾಗ ಘಟನೆ ನಡೆದಿದೆ. ಟ್ರ್ಯಾಕ್ಟರ್‌‌ಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗಳಿಂದ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ಮಾಡಿದ್ದಾರೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.