ದಾವಣಗೆರೆ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ.
ದಾವಣಗೆರೆ ನಗರದ ಹೊರವಲಯದ ಜಿಲ್ಲಾ ಪಂಚಾಯಿತ್ ಎದುರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಲು ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಕಡೆಗಳಿಂದ ಮೂರು ಬಸ್ ಗಳಲ್ಲಿ ಬೆಳಗಾವಿಗೆ ತೆರಳುತ್ತಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್ ಗೆ ಅಪಘಾತವಾಗಿದೆ.
ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.