ಮನೆ ರಾಜ್ಯ ಮರವಂತೆ ಬೀಚ್ ಗೆ ಉರುಳಿದ ಕಾರು: ಓರ್ವನ ಸಾವು

ಮರವಂತೆ ಬೀಚ್ ಗೆ ಉರುಳಿದ ಕಾರು: ಓರ್ವನ ಸಾವು

0

ಉಡುಪಿ (Udupi): ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್​ನಲ್ಲಿ ಕಾರು ಉರುಳಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೋರ್ವ ನಾಪತ್ತೆಯಾಗಿರುವ ಘಟನೆ ನಡಿದಿದೆ.
ಕೋಟೇಶ್ವರ ಗ್ರಾಮದ ನಿವಾಸಿ ವೀರಾಜ್ ಆಚಾರ್ಯ(28) ಮೃತಪಟ್ಟವರು.
ನಾಪತ್ತೆಯಾಗಿರುವ ವ್ಯಕ್ತಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ನಡೆದಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ ಕಾರು ಸಮುದ್ರಕ್ಕೆ ಬಿದ್ದಿದೆ.
ಮೂಲಗಳ ಪ್ರಕಾರ ದುರಂತಕ್ಕೀಡಾದ ಕಾರಿನಲ್ಲಿ ನಾಲ್ವರಿದ್ದರು ಎಂದು ತಿಳಿದುಬಂದಿದೆ. ಈ ಪೈಕಿ ಓರ್ವ ಕಾರಿನೊಳಗೆ ಸಾವನ್ನಪ್ಪಿದ್ದು, ಮತ್ತೊಬ್ಬರು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಳಿ ಮಳೆಗೆ ರಸ್ತೆ ಕಾಣದೆ ಕಾರು ಸಮುದ್ರಕ್ಕೆ ಇಳಿದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯ ಮೀನುಗಾರರ ಸಹಾಯದಿಂದ ಕಣ್ಮರೆಯಾದ ಯುವಕನನ್ನು ಹುಡುಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನರೈತರ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ
ಮುಂದಿನ ಲೇಖನಜಮ್ಮು-ಕಾಶ್ಮೀರ: ಇಬ್ಬರು ಉಗ್ರರರನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು