ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಪುನೀತ್ ಕೆರೆಹಳ್ಳಿ 2013 ರಿಂದ 2023 ರವರಗೆ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಸಮಾಜದಲ್ಲಿ ಶಾಂತಿ ಕದಡುವ ಯತ್ನ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಹಿನ್ನೆಲೆಯಲ್ಲಿ ಮೇಲೆ ಮೇಲಿಂದ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಸದ್ಯ ಪುನೀತ್ ಕೆರೆಹಳ್ಳಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪುನೀತ್ ಕೆರೆಹಳ್ಳಿ ವಿರುದ್ಧ ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.
ಇತ್ತೀಚೆಗೆ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಸಾಯಿಸಿದ್ದರು ಎಂದು ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆಯಾಗಿತ್ತು.