ಮನೆ ಅಪರಾಧ ಬಿಸಿ ಸಾಂಬಾರು ಪಾತ್ರೆಗೆ ಬಿದ್ದು ಮಗು ಸಾವು

ಬಿಸಿ ಸಾಂಬಾರು ಪಾತ್ರೆಗೆ ಬಿದ್ದು ಮಗು ಸಾವು

0

ಹುಬ್ಬಳ್ಳಿ(Hubballi): ಆಟವಾಡುತ್ತಾ ಬಿಸಿ ಸಾಂಬಾರು ಪಾತ್ರೆಗೆ ಬಿದ್ದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ಕುಂದಗೋಳ ತಾಲೂಕಿನ ಬಿಳೇಬಾಳ ಗ್ರಾಮದಲ್ಲಿ ನಡೆದಿದೆ.

1 ವರ್ಷ 6 ತಿಂಗಳ ಮಗು ಸ್ವಾತಿ ಚಲವಾದಿ ಸಾವಿಗೀಡಾಗಿದ್ದಾಳೆ.

ನವೆಂಬರ್ 10ರಂದು ಮನೆಯಲ್ಲಿ ಆಟವಾಡುತ್ತಿದ್ದಾಗ ಮಗು ಬಿಸಿ ಸಾಂಬರಿನಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ತಕ್ಷಣ ಕುಂದಗೋಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾಳೆ.

ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.