ಮಂಗಳೂರು(Mangalore): ಫ್ಯಾನ್‌ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ.
ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಹಾಗೂ ಸೌಮ್ಯ ನಾಯಕ್ (35) ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಇವರು ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ಮರೋಳಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ನಿನ್ನೆಯಷ್ಟೆ ಕೊಡಗು ಪ್ರವಾಸ ಮುಗಿಸಿ ಬಂದಿದ್ದರು ಎನ್ನಲಾಗಿದೆ. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














