ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಹರತಲೆಯಲ್ಲಿ ಬಟ್ಟೆ ತೊಳೆಯುವಾಗ ಆಕಸ್ಮಿಕವಾಗಿ ನಾಲೆಗೆ ಬಿದ್ದು ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ.
ಹರತಲೆ ಗ್ರಾಮದ ನಿವಾಸಿಗಳಾದ ಶಂಕರ್ ಹಾಗೂ ಬೇಬಿ ದಂಪತಿ ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾರೆ. ಈ ವೇಳೆ ಕಾಲು ಜಾರಿ ನಾಲೆಗೆ ಬಿದ್ದ ಪತ್ನಿಯನ್ನು ರಕ್ಷಿಸಲು ನಾಲೆಗೆ ಇಳಿದಿದ್ದ ಶಂಕರ್ ಕೂಡ ಕೊನೆಯುಸಿರೆಳೆದಿದ್ದಾನೆ.
ಕೊಚ್ಚಿ ಹೋದ ಮೃತದೇಹಕ್ಕಾಗಿ ಅಗ್ನಿಶಾಮಕ ದಳದವರು ಹುಡುಕಾಟ ನಡೆಸಿದ್ದು, ಇದೀಗ ಕಳಲೆ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ.
ಈ ಕುರಿತು ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.