ಮನೆ ಅಪರಾಧ ಕಬ್ಬು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್’ಗೆ ಕ್ರೂಸರ್ ಡಿಕ್ಕಿ: ದಂಪತಿ ಸಾವು

ಕಬ್ಬು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್’ಗೆ ಕ್ರೂಸರ್ ಡಿಕ್ಕಿ: ದಂಪತಿ ಸಾವು

0

ವಿಜಯಪುರ(Vijayapura): ಕಬ್ಬು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್​ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಇಂಡಿ ತಾಲೂಕಿನ ಧೂಳಖೇಡ್ ಬಳಿಯ ಎನ್ ಹೆಚ್ 50 ರಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಭಯ್ಯಾಜಿ ಶಿಂಧೆ (50) ಹಾಗೂ ಅವರ ಪತ್ನಿ ಸುಮಿತ್ರಾ ಶಿಂಧೆ (45) ಮೃತ ದಂಪತಿ.

ಅಪಘಾತದಲಲಿ 9 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಮಹಾರಾಷ್ಟ್ರದ ಸೊಲ್ಲಾಪುರ ಪಟ್ಟಣ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಥಣಿ ಮೂಲದ ಇವರೆಲ್ಲರೂ ಕ್ರೂಸರ್‌’ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿ ಇರುವ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ.

ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಬಿಇಎಂಎಲ್ ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ಮುಂದಿನ ಲೇಖನವಿಜಯಪುರ: ಹಾವು ಕಚ್ಚಿ ಗರ್ಭಿಣಿ ಸಾವು