ನವದೆಹಲಿ: ಹೊಸ ಹಣಕಾಸು ವರ್ಷದ ಮೊದಲ ದಿನ ಎಲ್ ಪಿಜಿ ದರವನ್ನು ಕಡಿಮೆ ಮಾಡಲಾಗಿದ್ದು, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ.
ಇನ್ನು 5ಕೆಜಿ ಎಫ್ ಟಿಎಲ್ (ಫ್ರೀ ಟ್ರೇಡ್ ಎಲ್ಪಿಜಿ) ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದು (ಏಪ್ರಿಲ್ 01) ರಿಂದಲೇ ಅನ್ವಯವಾಗಲಿದೆ.
ದೆಹಲಿಯಲ್ಲಿ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿಮೆಯಾಗಿದೆ. ಬೆಲೆ ಇಳಿಕೆ ನಂತರ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1764.50 ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1717.50 ರೂ. ಇದೆ. ಕೋಲ್ಕತ್ತಾದಲ್ಲಿ 1879 ರೂ. ಮತ್ತು ಚೆನ್ನೈನಲ್ಲಿ 1930 ರೂ. ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 1830 ರೂ. ಇಳಿಕೆಯಾಗಿದೆ.