ಮನೆ ರಾಜ್ಯ ಜಿ.ಎಂ.ಸಿದ್ದೇಶ್ವರ್’ಗೆ ಟಿಕೆಟ್ ನೀಡಬಾರದೆಂದು ಜಿಲ್ಲಾ ಮುಖಂಡರ ನಿಯೋಗ  ಪಕ್ಷದ ಪ್ರಮುಖರಿಂದ ಮನವಿ

ಜಿ.ಎಂ.ಸಿದ್ದೇಶ್ವರ್’ಗೆ ಟಿಕೆಟ್ ನೀಡಬಾರದೆಂದು ಜಿಲ್ಲಾ ಮುಖಂಡರ ನಿಯೋಗ  ಪಕ್ಷದ ಪ್ರಮುಖರಿಂದ ಮನವಿ

0

ಬೆಂಗಳೂರು: ಕಾರ್ಯಕರ್ತರನ್ನು ಕಡೆಗಣಿಸಿ ಕೆಂಗಣ್ಣಿಗೆ ಗುರಿಯಾಗಿ ಅಭಿವೃದ್ಧಿಯನ್ನೂ ಮಾಡದ ದಾವಣಗೆರೆ ಲೋಕಸಭಾ ಕ್ಷೇತ್ರದ ಹಾಲಿ ಸದಸ್ಯ ಜಿ.ಎಂ.ಸಿದ್ದೇಶ್ವರ್ ಗೆ ಟಿಕೆಟ್ ನೀಡಬಾರದೆಂದು ಜಿಲ್ಲಾ ಮುಖಂಡರ ನಿಯೋಗ  ಪಕ್ಷದ ಪ್ರಮುಖರಿಗೆ ಮನವಿ ಮಾಡಿದೆ.

ಈ ಸಂಬಂಧ ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಬಿ.ವೈಘಿ.ವಿಜಯೇಂದ್ರ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ದಾವಣಗೆರೆ ಜಿಲ್ಲಾ  ಮುಖಂಡರ ಬಿಜೆಪಿ ನಿಯೋಗ ಜಿ.ಎಂ ಸಿದ್ದೇಶ್ವರ್ ಗೆ ಟಿಕೆಟ್ ನೀಡಬಾರದೆಂದು ಮನವರಿಕೆ  ಮಾಡಿಕೊಟ್ಟಿದೆ.

ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಕರುಣಾಕರ ರೆಡ್ಡಿಘಿ, ಮಾಜಿ ಶಾಸಕ ಗುರುಸಿದ್ದನ ಗೌಡರ್, ಮಾಜಿ ವಿಧಾನಪರಿಷತ್ ಸದಸ್ಯ ಡಾ.ಶಿವಯೋಗಿ ಸ್ವಾಮಿ, ಮುಖಂಡರಾದ ಮಾಡಾಳ್ ಮಲ್ಲಿಕಾರ್ಜುನ, ಲೋಕಿಕೆರೆ ನಾಗರಾಜ್,  ಅಜಯ್‍ಕುಮಾರ್ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಕಾರ್ಯಕರ್ತರು  ಯಾವುದೇ ಕಾರಣಕ್ಕೂ ಸಿದ್ದೇಶ್ವರ್  ಅವರಿಗೆ ಟಿಕೆಟ್ ನೀಡಬಾರದೆಂದು ಆಗ್ರಹಿಸಿದ್ದಾರೆ.

ಮೊದಲು ದವಳಗಿರಿ ನಿವಾಸಲದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ  ನಿಯೋಗವು,  ಸಿದ್ದೇಶ್ವರ್ ಅವರಿಗೆ ಏಕೆ ಟಿಕೆಟ್ ನೀಡಬಾರದೆಂದು ಸವಿಸ್ತಾರವಾಗಿ ಮನವಿ  ಮಾಡಿಕೊಟಿತು.

ಜಿಲ್ಲೆಯಲ್ಲಿ ಸಿದ್ದೇಶ್ವರ್ ಸ್ಪರ್ಧೆಗೆ ವಿರೋಧವಿದೆ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲೂ ಕಾರ್ಯಕರ್ತರ ವಿರೋಧವಿದೆ.  ನಾಲ್ಕು ಬಾರಿ ಗೆದಿದ್ದರೂ ಜಿಲ್ಲೆಯನ್ನು ಅಭಿವೃದ್ಧಿಪಡಿಸಿಲ್ಲ ಎಂಬ ಆರೋಪವಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೂ ತೆಗೆದುಕೊಂಡಿಲ್ಲ. ಹೀಗಾಗಿ ಈ ಬಾರಿ  ಅವರಿಗೆ ಟಿಕೆಟ್ ನೀಡಬಾರದು. ಒಂದು ವೇಳೆ  ಅವರಿಗೆ ಟಿಕೆಟ್ ನೀಡಿದರೆ ಸೋಲುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ  ಸಿದ್ದೇಶ್ವರ್ ಅಭ್ಯರ್ಥಿಗಳ  ಪರವಾಗಿ ಕೆಲಸ  ಮಾಡದೆ ಕೆಲವು ಕಡೆ ಪಕ್ಷದ ಅಧಿಕೃತ ಅಭ್ಯರ್ಥಿಗಳ ಸೋಲಿಗೂ ಕಾರಣಕರ್ತರಾಗಿದ್ದಾರೆ. ಅವರ ಸ್ಪರ್ಧೆಗೆ ಎಲ್ಲೆಡೆ ವಿರೋಧ ಇರುವುದರಿಂದ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದೆಂದು  ಹಕ್ಕೋತ್ತಾಯ ಮಂಡಿಸಿದ್ದಾರೆ.

ನಂತರ ಮಧ್ಯಾಹ್ನ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ  ಅವರನ್ನು ಭೇಟಿ ಮಾಡಿದ ನಿಯೋಗವು, ಸಿದ್ದೇಶ್ವರ್ ಗೆ ಟಿಕೆಟ್ ನೀಡಲು ತೀವ್ರ ವಿರೋಧ ವ್ಯಕ್ತಪಡಿಸಿದೆ.

ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು.  ಒಂದು ವೇಳೆ ಕಾರ್ಯಕರ್ತರನ್ನು ಕಡೆಗಣಿಸಿ ಅಭ್ಯರ್ಥಿ ಘೋಷಿಸಿದರೆ ಚುನಾವಣೆಯಲ್ಲಿ ಬೆಂಬಲ ನೀಡುವುದಿಲ್ಲ ಎಂದು ನೇರವಾಗಿಯೇ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮುಂಬರುವ ಚುನಾವಣೆಯಲ್ಲಿ ಸಮೀಕ್ಷೆ ನಡೆಸಿ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕೆಂದು ನಿಯೋಗ ಮನವಿ ಮಾಡಿಕೊಂಡಿತು.

ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏಕಾಏಕಿ ಅಭ್ಯರ್ಥಿಯನ್ನು ಘೋಷಣೆ ಮಾಡಬಾರದು. 8 ವಿಧಾನಸಭಾ ಕ್ಷೇತ್ರಗಳಲ್ಲಿ  ಸಮೀಕ್ಷೆ ನಡೆಸಿ ಕಾರ್ಯಕರ್ತರ ಅಭಿಪ್ರಾಯವನ್ನು ಪಡೆಯಬೇಕು. ನಂತರವೇ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಮನವಿ ಮಾಡಿಕೊಂಡಿತು.

ಮನವಿ ಪತ್ರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ, ಕಾರ್ಯಕರ್ತರು ಮತ್ತು ಮುಖಂಡರ ಒತ್ತಾಸೆಯಂತೆ ಪಕ್ಷದ ವತಿಯಿಂದ ಸಮೀಕ್ಷೆ ನಡೆಸುತ್ತೇವೆ. ಆ ಸಮೀಕ್ಷೆಯಲ್ಲಿ ಯಾರ ಪರವಾಗಿ ಹೆಚ್ಚಿನ ಒಲವನ್ನು ತೋರುತ್ತಾರೋ ಅವರಿಗೆ ಟಿಕೆಟ್ ನೀಡುವಂತೆ ಪಕ್ಷದ ಚುನಾವಣಾ ಸಮಿತಿಗೆ ರಾಜ್ಯ ಘಟಕ ಶಿಫಾರಸ್ಸು ಮಾಡಲಿದೆ. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಬೇಕೆಂದು ಸಲಹೆ ಮಾಡಿದರು.

ಎಲ್ಲವನ್ನು ಸಹನೆಯಿಂದಲೇ ಆಲಿಸಿದ ವಿಜಯೇಂದ್ರ ಅವರು, ಸಮೀಕ್ಷೆಯಲ್ಲಿ ಯಾರ ಹೆಸರು ಮುಂಚೂಣಿಗೆ ಬರುತ್ತದೆಯೋ ಅವರಿಗೆ ಟಿಕೆಟ್ ನೀಡಲಾಗುತ್ತದೆ. 28 ಲೋಕಸಭಾ ಕ್ಷೇತ್ರಗಳಲ್ಲೂ ಸಮೀಕ್ಷೆ ಆಧಾರದ ಮೇಲೆಯೇ ಟಿಕೆಟ್ ನೀಡಲಾಗುತ್ತದೆ. ಕಾರ್ಯಕರ್ತರು ಯಾರಿಗೆ ಹೆಚ್ಚಿನ ಒಲವು ತೋರುತ್ತಾರೆಯೇ  ಅವರ ಆಶಯದಂತೆ ಪಕ್ಷ ನಡೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ದಾವಣಗೆರೆಯಲ್ಲಿ ಈ ಬಾರಿ ಸಮೀಕ್ಷೆ ನಡೆಸಿ ಟಿಕೆಟ್ ನೀಡಬೇಕೆಂಬುದು ಇಡೀ ಜಿಲ್ಲೆಯ ಕಾರ್ಯಕರ್ತರ ಒತ್ತಾಸೆಯಾಗಿದೆ.

ನಾವು ಯಾರ ಪರವಾಗಿಯೂ ಆಗಲಿ ಇಲ್ಲವೇ ವಿರೋಧವಾಗಿಯೂ ಇಲ್ಲಘಿ.  ಕಾರ್ಯಕರ್ತರ ಅಭಿಪ್ರಾಯದಂತೆ ನಡೆದುಕೊಳ್ಳಬೇಕು. ಜಿಲ್ಲೆಯ ವಾಸ್ತವ ಸ್ಥಿತಿ ಏನಿದೆಯೋ ಅದರಂತೆ ನಮ್ಮ ನಾಯಕರಿಗೆ ಮನವರಿಕೆ ಮಾಡಿದ್ದೇವೆ. ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕೆಂಬುದು ಕಾರ್ಯಕರ್ತರ ಒತ್ತಾಸೆ. ಅದರಲ್ಲೂ ಬಿ.ವೈಘಿ.ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ಎಲ್ಲೆಡೆ ಕಾರ್ಯಕರ್ತರು ಹುಚ್ಚೆದ್ದು ಕುಣಿಯುತ್ತಿದ್ದಾರೆ.

ದಾವಣಗೆರೆಯಲ್ಲಿ ಆರು ಬಾರಿ ಬಿಜೆಪಿ ಗೆದ್ದಿದೆ. ಈ ಬಾರಿಯೂ ನಮ್ಮ ಪಕ್ಷ ಗೆಲ್ಲಬೇಕು. ಪ್ರಧಾನಿ ನರೇಂದ್ರಮೋದಿ ಅವರು 3ನೇ ಬಾರಿಗೆ ಅಧಿಕಾರಕ್ಕೆ ಬರಬೇಕೆಂದರೆ ಜಿಲ್ಲೆಯಲ್ಲಿ ಬಿಜೆಪಿ ಬಾವುಟ ಹಾರಲೇ ಬೇಕು. ಕಾರ್ಯಕರ್ತರು ಒಗ್ಗೂಡಿ ಗೆಲುವಿಗೆ ಶ್ರಮಿಸಬೇಕೆಂದು ಕರೆ ಕೊಟ್ಟರು.

ಕಳೆದ ವಿಧಾನಸಭೆ ಚುನಾವಣೆ ವೇಳೆ ಬೇರೇ ಬೇರೆ ಕಾರಣಗಳಿಂದ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಬಿ.ವೈಘಿ.ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ನಂತರ ಸಾಕಷ್ಟು ಬದಲಾವಣೆಯಾಗಿದೆ. ಕಾರ್ಯಕರ್ತರು, ಯುವ ಮತದಾರರು ಸೇರಿದಂತೆ ಮತ್ತಿತರರು  ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ.

 ಹೀಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಇದಕ್ಕೆ ನಮ್ಮ ಸಂಪೂರ್ಣ ಸಹಕಾರ ಇರುತ್ತದೆ ಎಂದು ಬಿಎಸ್‍ವೈ ಬಳಿ ಮುಖಂಡರು ಹೇಳಿದ್ದಾರೆ.

ಹಿಂದಿನ ಲೇಖನಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್; ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ
ಮುಂದಿನ ಲೇಖನಸಚಿವರಿಗೆ ತಪ್ಪು ಮಾಹಿತಿ ನೀಡಿದ ಶಿರಸ್ತೇದಾರ್ ಸಸ್ಪೆಂಡ್