ಮಂಡ್ಯ(Mandya): ತಾಯಿಯನ್ನು ಕಳೆದುಕೊಂಡ ನಂತರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಐಷಾರಾಮಿ ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಜಿಲ್ಲೆಯ ಶ್ರೀರಂಗಪಟ್ಟಣದ ಬಳಿಯ ನಿಮಿಷಾಂಭ ದೇಗುಲದ ಬಳಿ ಕಾವೇರಿ ನದಿಯಲ್ಲಿ ಐಷಾರಾಮಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕಾರಿನ ಬಗ್ಗೆ ಪರಿಶೀಲನೆ ಪೊಲೀಸರು ವಿಚಾರಣೆ ನಡೆಸಿದಾಗ ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ. ಬಳಿಕ ಸ್ಥಳಕ್ಕಾಗಮಿಸಿ ಕಾರನ್ನು ನದಿಯಿಂದ ಹೊರ ತೆಗೆಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆಗ ಮಾನಸಿಕ ಖಿನ್ನತೆಯಿಂದ ಬಳುತ್ತಿದ್ದ ಬೆಂಗಳೂರಿನ ವ್ಯಕ್ತಿ ಕಾವೇರಿ ನದಿಯಲ್ಲಿ ಕಾರನ್ನು ಮುಳುಗಿಸಿ ತೆರಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ತನ್ನ ತಾಯಿ ನಿಧನದ ಬಳಿಕ ತೀವ್ರ ಮಾನಸಿಕ ಖಿನ್ನತೆಗೊಳಗಾಗಿದ್ದ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ ರೂಪೇಶ್ ಎಂಬಾತ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ತನ್ನ ಬಿಎಂಡಬ್ಲ್ಯೂ ಕಾರನ್ನು ನದಿಯಲ್ಲಿ ಮುಳುಗಿಸಿ ವಾಪಸ್ ತೆರಳಿದ್ದಾನೆ.
ಪೊಲೀಸರು ಕಾರಿನ ಪರಿಶೀಲನೆ ನಡೆಸಿ, ಮಾಲೀಕನ್ನು ಪಟ್ಟಣ ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಆತನ ಖಿನ್ನತೆ ವಿಚಾರ ಗೊತ್ತಾಗಿದೆ. ಬಳಿಕ ಸಂಬಂಧಿಕರನ್ನು ಠಾಣೆಗೆ ಕರೆಸಿದ ಪೊಲೀಸರು ಅವರ ಹೇಳಿಕೆ ಆಧರಿಸಿ ಪ್ರಕರಣ ಖುಲಾಸೆ ಮಾಡಿದ್ದಾರೆ.