ಮನೆ ಅಪರಾಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್: ಪ್ರತಿಭಟನಾಕಾರರಿಂದ ಪೊಲೀಸ್ ಜೀಪ್ ಮೇಲೆ ಕಲ್ಲು ತೂರಾಟ

ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್: ಪ್ರತಿಭಟನಾಕಾರರಿಂದ ಪೊಲೀಸ್ ಜೀಪ್ ಮೇಲೆ ಕಲ್ಲು ತೂರಾಟ

0

ದಾವಣಗೆರೆಸಾಮಾಜಿಕ ಮಾಧ್ಯಮದಲ್ಲಿ ಅಲ್ಪಸಂಖ್ಯಾತ ಧರ್ಮದ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಕಿಡಿಗೇಡಿಗಳು ಪೊಲೀಸ್ ಜೀಪ್ ಗೆ ಕಲ್ಲು ತೂರಿರುವ ಘಟನೆ ನಡೆದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಸ್ಥಳಕ್ಕೆ ಬಂದ ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಕುಮಾರ್ ಮತ್ತು ಸುನೀಲ್ ಕುಮಾರ್ ತೇಲಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಆದರೆ ಪೊಲೀಸರ ಮನವಿಗೆ  ಅಂತಿಮವಾಗಿ ಪೊಲೀಸರು ಈ ಯುವಕರನ್ನು ಚದುರಿಸಲು ಲಾಠಿ ಪ್ರಹಾರ ಮಾಡಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಪೊಲೀಸ್ ಜೀಪ್ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಗೊಳಿಸಿದ್ದಾರೆ.

ಘಟನೆಯ ಗಂಭೀರತೆಯನ್ನು ಅರ್ಥಮಾಡಿಕೊಂಡ ಪೊಲೀಸರು ಇಡೀ ಪಟ್ಟಣವನ್ನು ಬಿಗಿ ಬಂದೋಬಸ್ತ್ ಮಾಡಿ ಉದ್ವಿಗ್ನತೆಯನ್ನು ಹತೋಟಿಗೆ ತಂದರು.  ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ವ್ಯಕ್ತಿಯನ್ನೂ ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಮಧ್ಯರಾತ್ರಿಯವರೆಗೆ ಐಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹಿಂದಿನ ಲೇಖನಕೇರಳದ ಮಲಂಬುಳ ಬಂಡೆಕಲ್ಲಿನ ನಡುವೆ ಸಿಲುಕಿದ್ದ ಯುವಕನ ರಕ್ಷಣೆ
ಮುಂದಿನ ಲೇಖನಬೆಂಗಳೂರಿನ ಪೀಣ್ಯದಿಂದ ಒಂದೇ ದಿನ ಲಕ್ಷ ಕೇಸರಿ ಶಾಲು ರವಾನೆ : ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್