ಮನೆ ರಾಜಕೀಯ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಅಸ್ಸಾಂ ಸಿಎಂ ವಿರುದ್ಧ ಪ್ರಕರಣ ದಾಖಲು

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಅಸ್ಸಾಂ ಸಿಎಂ ವಿರುದ್ಧ ಪ್ರಕರಣ ದಾಖಲು

0

ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶರ್ಮಾ ವಿರುದ್ಧ ಭಾರತೀಯ ದಂಡಸಂಹಿತೆಯ (ಐಪಿಸಿ) ಸೆಕ್ಷನ್ 504, 505 (2)ರ ಅನ್ವಯ ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ. ಟಿಪಿಸಿಸಿ ಅಧ್ಯಕ್ಷ, ಸಂಸದ ಮಲ್ಕಾಜ್‌ಗಿರಿ ಎ ರೇವಂತ್ ರೆಡ್ಡಿ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Advertisement
Google search engine

ಫೆಬ್ರುವರಿ 11ರಂದು ಉತ್ತರಾಖಂಡದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಹಿಮಂತ ಬಿಸ್ವ ಶರ್ಮಾ, ಭಾರತೀಯ ಸೇನೆಯು ನಡೆಸಿದ್ದ ನಿರ್ಧಿಷ್ಟ ದಾಳಿಗೆ (ಸರ್ಜಿಕಲ್ ಸ್ಟ್ರೈಕ್) ಸಾಕ್ಷ್ಯ ಕೇಳಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ರಾಹುಲ್ ಗಾಂಧಿ ಅವರು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ಮಗ ಎಂಬುದಕ್ಕೆ ಬಿಜೆಪಿ ಪುರಾವೆ ಕೇಳಿತ್ತೇ ಎಂದು ಪ್ರಶ್ನಿಸಿದ್ದರು.

ಬಿಸ್ವ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧೆಡೆ ಅವರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ.

ಹಿಂದಿನ ಲೇಖನನಿಲ್ಲದ ವಿವಾದ: ರಾಜ್ಯದ ಹಲವೆಡೆ ಹಿಜಾಬ್ ತೆಗೆಯಲು ವಿದ್ಯಾರ್ಥಿಗಳ ನಕಾರ, ಮಾತಿನ ಚಕಮಕಿ
ಮುಂದಿನ ಲೇಖನತಾಯಿಯ ಮಹತ್ವ ಸಾರಲಿರುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವ