ಮೈಸೂರು (Mysuru): ಇಂದು ಬೆಳ್ಳಂಬೆಳಿಗ್ಗೆ ನಗರದಲ್ಲಿ ಸರಗಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ.
ಮೈಸೂರಿನ ನಿಮಿಷಾಂಬ ಲೇಔಟ್ ನಲ್ಲಿ ಬೆಳಿಗ್ಗೆ ಘಟನೆ ನಡೆದಿದೆ. ಸ್ಪ್ಲೆಂಡರ್ ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆಯರ ಸರ ಕಳ್ಳತನ ಮಾಡಲು ಯತ್ನಿಸಿದ್ದಾನೆ.
ಮಹಿಳೆಯೊಬ್ಬರು ನಾಯಿಯೊಂದಿಗೆ ವಾಕ್ ಗೆ ಬಂದಿದ್ದು, ಈ ವೇಳೆ ಬೈಕ್ ನಲ್ಲಿ ಬಂದ ವ್ಯಕ್ತಿ ಸರಗಳ್ಳತನಕ್ಕೆ ಯತ್ನಿಸಿದ್ದಾನೆ. ಜೊತೆಗೆ ಮತ್ತೊಬ್ಬ ಮಹಿಳೆ ಕದಿಯಲು ಯತ್ನಿಸಿದ್ದಾನೆ. ಮಹಿಳೆಯರ ಸಮಯ ಪ್ರಜ್ಞೆಯಿಂದ ಕಳ್ಳತನ ಯತ್ನ ವಿಫಲವಾಗಿದೆ.
ಕುತ್ತಿಗೆ ಕೈ ಹಾಕಿತ್ತಿದ್ದಂತೆ ಮಹಿಳೆಯರು ಸರ ಬಿಗಿಯಾಗಿ ಹಿಡಿದುಕೊಂಡು ಕೂಗಿಕೊಂಡಿದ್ದಾರೆ. ಈ ವೇಳೆ ಮನೆಯವರು ಹೊರಬರುತ್ತಿದ್ದಂತೆ ಕಳ್ಳ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ದೃಶ್ಯ ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ.
ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.














