ಮನೆ ರಾಜ್ಯ ಬಂಡೀಪುರದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವು: ಅರಣ್ಯ ಇಲಾಖೆ ವಿರುದ್ಧ ಪರಿಸರ ವಾದಿಗಳ ಆಕ್ರೋಶ

ಬಂಡೀಪುರದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವು: ಅರಣ್ಯ ಇಲಾಖೆ ವಿರುದ್ಧ ಪರಿಸರ ವಾದಿಗಳ ಆಕ್ರೋಶ

0

ಚಾಮರಾಜನಗರ(Chamarajanagar): ಗುಂಡ್ಲುಪೇಟೆ ತಾಲೂಕಿನ‌ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಿದ್ದರೂ, ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸ್ಥಳದಲ್ಲೇ ಮೃತಪಟ್ಟಿದೆ.

ಈ ಸಂಬಂಧ ಪ್ರಕರಣ​ ದಾಖಲಿಸಿರುವ ಪೊಲೀಸರು ಲಾರಿ, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಬಂಡೀಪುರ ಅಭಯಾರಣ್ಯದಲ್ಲಿ ಭಾರಿ ವಾಹನಗಳಿಗೆ ರಾತ್ರಿ ಸಂಚಾರ ನಿಷೇಧಿಸಲಾಗಿದೆ. ಆದರೆ ನಿಯಮ ಮೀರಿ ಸಂರಕ್ಷಿತಾರಣ್ಯದಲ್ಲಿ ವೇಗವಾಗಿ ಬಂದ ಲಾರಿ ರಸ್ತೆ ಮಧ್ಯೆ ನಿಂತಿದ್ದ ಕಾಡಾನೆಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ.

ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಪರಿಶೀಲನೆ ನಡೆಸಿದ ಬಳಿಕ ಚಾಲಕ ಮತ್ತು ಲಾರಿಯನ್ನು ವಶಕ್ಕೆ ಪಡೆದು ಕ್ರಮಕ್ಕೆ ಮುಂದಾಗಿದ್ದಾರೆ.

ಪರಿಸರವಾದಿಗಳ ಆಕ್ರೋಶ: ಹೆಣ್ಣಾನೆ ಸಾವಿಗೀಡಾಗಿದ್ದು ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ನಿರ್ಬಂಧವಿದ್ದರೂ ಅರಣ್ಯದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.

ಹಿಂದಿನ ಲೇಖನನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ಮುಂದಿನ ಲೇಖನಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನಿನ ಅಗತ್ಯವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ