ಮನೆ ರಾಜ್ಯ ಕಾಡ್ಗಿಚ್ಚು ನಂದಿಸಲು ಹೋಗಿ ತೀವ್ರವಾಗಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ನಿಧನ

ಕಾಡ್ಗಿಚ್ಚು ನಂದಿಸಲು ಹೋಗಿ ತೀವ್ರವಾಗಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ನಿಧನ

0

ಹಾಸನ: ಸಕಲೇಶಪುರ ತಾಲ್ಲೂಕಿನ ಕಾಡುಮನೆ ಬಳಿ ಗುರುವಾರ ರಣಭಿಕ್ತಿ ರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು ನಂದಿಸಲು ಹೋಗಿ ತೀವ್ರವಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್‌ ಸುಂದರೇಶ್ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಫಾರೆಸ್ಟರ್‌ ಮಂಜುನಾಥ ಹಾಗೂ ಗಾರ್ಡ್‌ ಸುಂದರೇಶ್‌ ಅವರನ್ನು ಬೆಂಗಳೂರಿನ ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಾಸಕ ಎಚ್.ಕೆ. ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು.

ಕಾಡುಮನೆ ಇಟ್ಟಿಗೆ ಗೂಡು ಪ್ರದೇಶದಲ್ಲಿ ಬೆಂಕಿ ಹತ್ತಿ ಕೊಂಡಾಗ ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲಿಗೆ ತೆರಳಿದ್ದರು. ಗಾಳಿಯ ತೀವ್ರತೆಗೆ ಬೆಂಕಿ ಎಲ್ಲೆಡೆ ಆವರಿಸಿದ್ದರಿಂದ ಅರಣ್ಯ ಇಲಾಖೆಯ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದರು.

ಶೇ 80 ರಷ್ಟು ಸುಟ್ಟ ಗಾಯಗಳಾಗಿದ್ದ ಸುಂದರೇಶ್‌ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅದಕ್ಕಾಗಿಯೇ ಝೀರೋ ಟ್ರಾಫಿಕ್‌ನಲ್ಲಿ ಸುಂದರೇಶ್‌ ಹಾಗೂ ಮಂಜುನಾಥ ಅವರನ್ನು ಬೆಂಗಳೂರಿಗೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಸುಂದರೇಶ್, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾದ ಸುಂದರೇಶ್‌ ಅವರ ಮೃತದೇಹಕ್ಕೆ ಹಾಸನದ ಅರಣ್ಯ ಇಲಾಖೆಯಿಂದ ಗೌರವಾರ್ಪಣೆ ಸಲ್ಲಿಸಿದ ಬಳಿಕ ಸ್ವಗ್ರಾಮಕ್ಕೆ ಕಳುಹಿಸಲಾಗುವುದು. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಲೇಖನಮಡಿಕೇರಿ: ಹಳೆಯ ಶೌಚ ಗುಂಡಿಗೆ ಬಿದ್ದು ಕಾಡಾನೆ ಸಾವು
ಮುಂದಿನ ಲೇಖನಮೈಸೂರಿನ ತ್ರಿನೇಶ್ವರನಿಗೆ ಚಿನ್ನದ ಕೊಳಗ ಧಾರಣೆ: ವಿಶೇಷ ಪೂಜೆ