ಮಧ್ಯಪ್ರದೇಶ: ಮಧ್ಯಪ್ರದೇಶದ ಜಬಲ್ ಪುರದಲ್ಲಿರುವ ಪ್ರಸಿದ್ಧ ಪ್ರವಾಸಿತಾಣವಾದ ಭೇದಘಾಟ್‌ಗೆ ಕರೆದೊಯ್ಯಲು ತಾಯಿ ನಿರಾಕರಿಸಿದ್ದಕ್ಕೆ 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಐದನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ತಾಯಿಯನ್ನು 10 ಕಿಮೀ ದೂರದಲ್ಲಿರುವ ಭೇದಘಾಟ್‌ಗೆ ಕರೆದುಕೊಂಡು ಹೋಗುವಂತೆ ಪೀಡಿಸುತ್ತಿದ್ದಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಯಿ ನಿರಾಕರಿಸಿದಾಗ ಬಾಲಕಿ ಮೆಟ್ಟಿಲು ಹತ್ತಿ ಡೋರ್ ಕರ್ಟನ್ ಗೆ ನೇಣು ಬಿಗಿದುಕೊಂಡಿದ್ದಾಳೆ ಎಂದು ದನ್ವಂತ್ರಿ ನಗರ ಠಾಣೆಯ ಇನ್ಸ್ ಪೆಕ್ಟರ್ ವಿನೋದ್ ಪಾಠಕ್ ತಿಳಿಸಿದ್ದಾರೆ. ಶವ ಪರೀಕ್ಷೆ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
Saval TV on YouTube