ಮೈಸೂರು: ನಗರದ ಚಾಮುಂಡಿ ಬೆಟ್ಟದ ಪಾದದಲ್ಲಿ ಪಕ್ಷಿ ಪ್ರಾಣಿಗಳಿಗೆ ನೀರಿನ ತೊಟ್ಟಿ ಅಳವಡಿಸುವ ಮೂಲಕ ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಕೇಂದ್ರ ಪ್ರಾಣಿಗಳ ಕಲ್ಯಾಣ ಮಂಡಳಿಯ ರಾಜ್ಯ ಅಧ್ಯಕ್ಷ ಮಿತ್ತಲ್, ಜೈನ ಧರ್ಮದ ಕೊನೆಯ ತೀರ್ಥ೦ಕರರಾಗಿದ್ದ ಭಗವಾನ್ ಮಹಾವೀರರು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ತೋರಿಸಿದರು ಎಂದು ಹೇಳಿದರು.
ಮನುಷ್ಯ ಹುಟ್ಟಿನಿಂದಲೇ ಶ್ರೇಷ್ಠನಾಗುವುದಿಲ್ಲ. ಸತ್ಯದ ಹಾದಿಯಲ್ಲಿ, ದಾರ್ಶನಿಕರ ತತ್ವ–ಸಿದ್ಧಾಂತಗಳನ್ನು ನಂಬಿ ನಡೆದಾಗ ಮನುಷ್ಯನ ಜೀವನ ಶ್ರೇಷ್ಠವಾಗುವುದು ಎಂದು ಅಭಿಪ್ರಾಯಪಟ್ಟರು.
ಬಿಸಲಿನ ಬೇಗೆಯಿಂದ ಎಲ್ಲ ಜೀವಿಗಳು ತತ್ತರಿಸುತ್ತಿವೆ. ಮನುಷ್ಯರಷ್ಟೇ ಅಲ್ಲ, ಪ್ರಾಣಿ ಪಕ್ಷಿಗಳು ನೀರು, ಆಹಾರಕ್ಕಾಗಿ ಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣಿ, ಪಕ್ಷಿಗಳ ಸಂಕಷ್ಟ ಅರಿತು ಮಹಾವೀರ ಜಯಂತಿ ಅಂಗವಾಗಿ ನೀರಿನ ತೊಟ್ಟಿ ಅಳವಡಿಸಲು ಮುಂದಾಗಿದ್ದಾರೆ. ಮನುಷ್ಯನ ಜೀವ ಎಷ್ಟು ಮುಖ್ಯವೋ ಪ್ರಾಣಿ, ಪಕ್ಷಿಗಳ ಜೀವ ಕೂಡ ಅಷ್ಟೇ ಮುಖ್ಯ. ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಜಲಮೂಲಗಳು ಬತ್ತುತ್ತಿವೆ. ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ನೀರಿಗಾಗಿ ಮೈಲುಗಟ್ಟಲೆ ಅಲೆಯಬೇಕಾಗಿದೆ. ಇದು ಸಣ್ಣ ಪಕ್ಷಿ, ಪ್ರಾಣಿಗಳ ಬದುಕಿಗೆ ಮಾರಕವಾಗಿದೆ. ನೀರು ಮತ್ತು ಆಹಾರ ಇಲ್ಲದೆ ಪಕ್ಷಿಗಳು ಜೀವ ಕಳೆದುಕೊಳ್ಳುವ ಭೀತಿ ಕಾಡುತ್ತಿದೆ. ಎಂದು ಹೇಳಿದರು
ಇದೇ ಸಂದರ್ಭದಲ್ಲಿ ಕಲ್ಯಾಣ ಮಂಡಳಿಯ ರಾಜ್ಯ ಅಧ್ಯಕ್ಷ ಎಸ್ ಕೆ ಮಿತ್ತಲ್, ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಪೃಥ್ವಿ ಸಿಂಗ್ ಚಂದಾವತ, ಜೈ ಭೀಮ್ ಜನಸ್ಪಂದನ ವೇದಿಕೆ ಅಧ್ಯಕ್ಷ ಚೇತನ್ ಕಾಂತರಾಜು, ರಾಕೇಶ್, ಸಚಿಂದ್ರ, ಹಾಗೂ ಇನ್ನಿತರರು ಭಾಗವಹಿಸಿದ್ದರು.