ಮನೆ ಅಪರಾಧ ಹಿಂದೂ ಯುವಕನಿಗೆ ಅನ್ಯಕೋಮಿನ ಯುವಕರಿಂದ ಚಾಕು ಇರಿತ

ಹಿಂದೂ ಯುವಕನಿಗೆ ಅನ್ಯಕೋಮಿನ ಯುವಕರಿಂದ ಚಾಕು ಇರಿತ

0

ಶಿಕಾರಿಪುರ: ಹಿಂದೂ ಯುವಕನಿಗೆ ಅನ್ಯಕೋಮಿನ ಯುವಕರು ಚಾಕುವಿನಿಂದ ಇರಿದ ಘಟನೆ ಫೆ.6ರ ಮಂಗಳವಾರ ರಾತ್ರಿ ಪಟ್ಟಣದ ದೊಡ್ಡಪೇಟೆಯಲ್ಲಿ ನಡೆದಿದೆ.

ದೊಡ್ಡಪೇಟೆಯಲ್ಲಿ ದ್ವಿಚಕ್ರವಾಹನವನ್ನು ಅಜಾಗರೂಕತೆಯಿಂದ ಓಡಿಸುತ್ತಿದ್ದನ್ನು ಪ್ರಶ್ನಿಸಿದ ಕುಮದ್ವತಿ ಕಾಲೇಜಿನಲ್ಲಿ ಕಂಪ್ಯೂಟರ್ ಆಪರೇಟರ್ ಅಗಿ ಕಾರ್ಯ ನಿರ್ವಹಿಸುತ್ತಿದ್ದ ಯುವಕ ಹಾಗೂ ದೊಡ್ಡಪೇಟೆ ನಿವಾಸಿ ಸುಶೀಲ್(23) ಅವರಿಗೆ ಅನ್ಯಕೋಮಿನ ನಾಲ್ವರು ಯುವಕರ ತಂಡ ಚಾಕುವಿಂದ ಇರಿದಿದೆ. ಚಾಕು ಇರಿತಕ್ಕೆ ಒಳಗಾದ ಯುವಕನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಾಕು ಇರಿತ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಿಂದೂ ಸಂಘಟನೆ ಪದಾಧಿಕಾರಿಗಳು ಹಾಗೂ ಸ್ಥಳೀಯರು ಒತ್ತಾಯಿಸಿದರು. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಹಿಂದಿನ ಲೇಖನಆನ್ ಲೈನ್ ನಲ್ಲಿ ಬ್ಯುಸಿನೆಸ್ ಮಾಡುವ ಆಫರ್ ನೀಡಿ ೪೨.೮೦ ಲಕ್ಷ ವಂಚನೆ
ಮುಂದಿನ ಲೇಖನಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳು ಹೈ ಅಲರ್ಟ್ ಘೋಷಣೆ