ಮನೆ ರಾಜ್ಯ ಏಪ್ರಿಲ್ 15ರಿಂದ 23ರವರೆಗೆ ಐತಿಹಾಸಿಕ ಬೆಂಗಳೂರು ಕರಗ

ಏಪ್ರಿಲ್ 15ರಿಂದ 23ರವರೆಗೆ ಐತಿಹಾಸಿಕ ಬೆಂಗಳೂರು ಕರಗ

0

ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವವು ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ನಡೆಯಲಿದೆ.

ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ ಎಂದು ಹೇಳಲಾಗಿದೆ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ಫೆ.18ರಂದು ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ.

ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು, ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.

ಹಿಂದಿನ ಲೇಖನಪಾಕ್‌ ನ ಕುಖ್ಯಾತ ಭೂಗತ ಪಾತಕಿ ಗುಂಡೇಟಿಗೆ ಬಲಿ
ಮುಂದಿನ ಲೇಖನಮತಾಂತರ ಯತ್ನವನ್ನು ತಕ್ಷಣ ನಿಲ್ಲಿಸದಿದ್ದರೆ ಕ್ರೈಸ್ತರನ್ನು ಶ್ರೀರಾಮ ಸೇನೆ ಒದ್ದು ಓಡಿಸಲಿದೆ: ಪ್ರಮೋದ್‌ ಮುತಾಲಿಕ್ ಎಚ್ಚರಿಕೆ