ಮನೆ ರಾಜ್ಯ ಧಾರಾಕಾರ ಮಳೆಗೆ ನೆಲಕ್ಕುರುಳಿದ ಬೃಹತ್ ಮರ

ಧಾರಾಕಾರ ಮಳೆಗೆ ನೆಲಕ್ಕುರುಳಿದ ಬೃಹತ್ ಮರ

0

ವಿಜಯಪುರ : ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೃಹತ್ ಮರವೊಂದು ನೆಲಕ್ಕುರುಳಿದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಗಾಂಧಿಚೌಕ್‌ಗೆ ಹೋಗುವ ಮಾರ್ಗದಲ್ಲಿ ನಡೆದಿದೆ.

ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ತಡರಾತ್ರಿ ಬೃಹತ್ ಮರವೊಂದು ನೆಲಕ್ಕುರುಳಿದೆ. ರಾತ್ರಿ ಧರೆಗುರುಳಿದ ಪರಿಣಾಮ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಮರ ಬಿದ್ದ ರಭಸಕ್ಕೆ ಎರಡು, ಮೂರು ಅಂಗಡಿಗಳು ಜಖಂ ಆಗಿವೆ. ಜೊತೆಗೆ ವಿದ್ಯುತ್ ಕಂಬಗಳಿಗೂ ಹಾನಿಯಾಗಿದ್ದು, ವೈರ್ ಕಡಿತಗೊಂಡಿದೆ.