ಮನೆ ರಾಷ್ಟ್ರೀಯ ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ..!

ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ..!

0

ಮುಂಬೈ : ಉಗ್ರ ದಾಳಿ ನಡೆಸುವುದಾಗಿ ಮುಂಬೈ ಸಂಚಾರ ಪೊಲೀಸ್​ ಠಾಣೆಗೆ ವಾಟ್ಸಪ್ ಬೆದರಿಕೆ ಸಂದೇಶ ಬಂದಿದೆ. ಅನಾಮಿಕ ವ್ಯಕ್ತಿಯೊಬ್ಬನಿಂದ ಬೆದರಿಕೆ ಸಂದೇಶ ಬಂದಿದ್ದು, ನಗರದ್ಯಾಂತ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.

ಪಾಕಿಸ್ತಾನ ಮೂಲದ ಜಿಹಾದಿ ಗುಂಪಿನ ಸದಸ್ಯನಿಂದ ಬೆದರಿಕೆ ಬಂದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಪಾಕಿಸ್ತಾನ ಲಷ್ಕರ್-ಎ-ಜಿಹಾದಿ ಸಂಘಟನೆಯ 14 ಉಗ್ರರು ಭಾರತ ಪ್ರವೇಶಿಸಿದ್ದಾರೆ. 400 ಕೆಜಿ ಆರ್‌ಡಿಎಕ್ಸ್‌ ಸ್ಫೋಟಿಸಿ ಜನರನ್ನ ಕೊಲ್ಲಲಿದ್ದಾರೆ. ಅಲ್ಲದೇ ನಗರಾದ್ಯಂತ 34 ವಾಹನಗಳಲ್ಲಿ ಮಾನವ ಬಾಂಬ್‌ ಸ್ಫೋಟಿಸಲಾಗುವುದು ಎಂದು ಎಚ್ಚರಿಕೆ ಸಂದೇಶ ಕಳಿಸಿರುವುದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ.

ಬೆದರಿಕೆ ಸಂದೇಶ ಬಂದ ಕೂಡಲೇ ಮುಂಬೈ ಟ್ರಾಫಿಕ್‌ ಪೊಲೀಸರು, ಅಪರಾಧ ವಿಭಾಗಕ್ಕೆ ಮಾಹಿತಿ ರವಾನಿಸಿದ್ದಾರೆ. ಮುಂಬೈ ಪೊಲೀಸರು ಫುಲ್‌ ಅಲರ್ಟ್‌ ಆಗಿದ್ದು, ಇಡೀ ರಾಜ್ಯದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೇ ಬೆದರಿಕೆಯ ಪ್ರತಿಯೊಂದು ಸಾಧ್ಯತೆ ಮತ್ತು ಮೂಲವನ್ನು ತನಿಖೆ ಮಾಡಲಾಗುತ್ತಿದೆ.

ಇನ್ನೂ ಮುಂಬೈನಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮಗಳು ನಡೆಯಲಿದೆ. ಹೀಗಾಗಿ ಅನಂತ ಚತುರ್ದಶಿ ದಿನವನ್ನೇ ಟಾರ್ಗೆಟ್‌ ಮಾಡಲಾಗಿದೆಯೇ ಎಂಬ ಅನುಮಾನಗಳೂ ಹುಟ್ಟಿಕೊಂಡಿದೆ.